Home ಜಿಲ್ಲೆ 4 ತಿಂಗಳಲ್ಲಿ ಬೀದರ್ ‘ಬ್ರಿಮ್ಸ್’ ಆಸ್ಪತ್ರೆ ಚಿತ್ರಣ ಬದಲು: ಸಚಿವರ ಭರವಸೆ

4 ತಿಂಗಳಲ್ಲಿ ಬೀದರ್ ‘ಬ್ರಿಮ್ಸ್’ ಆಸ್ಪತ್ರೆ ಚಿತ್ರಣ ಬದಲು: ಸಚಿವರ ಭರವಸೆ

ಬೀದರ್: ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಬೀದರ್‍ನ ಬ್ರಿಮ್ಸ್ (ಃಖIಒS) ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಒಂದೇ ದಿನದಲ್ಲಿ ಸುಧಾರಣೆ ಸಾಧ್ಯವಿಲ್ಲ, ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ:

ಬ್ರಿಮ್ಸ್ ಆಸ್ಪತ್ರೆಯ ವ್ಯವಸ್ಥೆಗಳ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಬ್ರಿಮ್ಸ್ ಆಸ್ಪತ್ರೆಯಲ್ಲಿ ಈಗಾಗಲೇ ಸಾಕಷ್ಟು ಸುಧಾರಣೆಗಳಾಗುತ್ತಿರುವುದು ನಿಮ್ಮ ಗಮನಕ್ಕೂ ಬಂದಿದೆ. ಆದರೆ, ಯಾವುದೇ ದೊಡ್ಡ ಮಟ್ಟದ ಬದಲಾವಣೆ ಒಂದೇ ದಿನದಲ್ಲಿ ಆಗಲು ಸಾಧ್ಯವಿಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಟೆಂಡರ್ ಕರೆದು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

3-4 ತಿಂಗಳಲ್ಲಿ ಬ್ರಿಮ್ಸ್ ಚಿತ್ರಣ ಬದಲು:

“ಬ್ರಿಮ್ಸ್ ನಿರ್ದೇಶಕರು, ವೈದ್ಯರು, ಲೋಕೋಪಯೋಗಿ (PWಆ) ಇಲಾಖೆ ಹಾಗೂ ಇತರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಯ ಸುಧಾರಣೆಗಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಕೇವಲ ಮೂರ್ನಾಲ್ಕು ತಿಂಗಳಲ್ಲಿ ಬ್ರಿಮ್ಸ್ ಆಸ್ಪತ್ರೆಯ ಚಿತ್ರಣವೇ ಸಂಪೂರ್ಣವಾಗಿ ಬದಲಾಗಲಿದೆ. ಈಗಾಗಲೇ ಅಲ್ಲಿ ಸಾವಿರಾರು ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಅತ್ಯುತ್ತಮ ರೀತಿಯಲ್ಲಿ ವೈದ್ಯಕೀಯ ಸೇವೆ ಒದಗಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ” ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.