
ಪಾಟ್ನಾ,ಮೇ.೭- ಬಿಹಾರದ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸೇರಿದಂತೆ ಜೆಡಿಯು- ಬಿಜೆಪಿ ನೇತೃತ್ವದ ಮೈತ್ರಿಕೂಟದ ೩೧ ಶಾಸಕರು ನೂತನ ಸಚಿವರಾಗಿ ಇಂದು ಪಮಾಣವಚನ ಸ್ವೀಕರಿಸಿದರು.
ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಜೆಪಿ ನಡ್ಡಾ, ಜಿತಿನ್ ರಾಮ್ ಮಾಂಝಿ, ಮುಖ್ಯಮಂತ್ರಿ ಸಮ್ರಾಟ್ ಚೌಧರಿ, ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಎನ್ ಡಿಎ ಮಿತ್ರ ಪಕ್ಷಗಳ ನಾಯಕರು ಸಾಕ್ಷಿಯಾದರು
ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವವನ ಬೋಧಿಸಿದರು, ಇತ್ತೀಚೆಗಷ್ಟೇ ರಾಜಕೀಯಕ್ಕೆ ಸೇರಿದ್ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರಿಗೆ ಸಚಿವ ಸಂಪುಟಲ್ಲಿ ಸ್ಥಾನ ದೊರೆತಿದೆ.
ಸಚಿವರಾಗಿ ವಿಜಯ್ ಕುಮಾರ್ ಸಿನ್ಹಾ, ದಿಲೀಪ್ ಕುಮಾರ್ ಜೈಸ್ವಾಲ್, ನಿಶಾಂತ್ ಕುಮಾರ್ ಮತ್ತು ಲೇಶಿ ಸಿಂಗ್, ಭಗವಾನ್ ಸಿಂಗ್ ಕುಶ್ವಾಹ, ಅರುಣ್ ಶಂಕರ್ ಪ್ರಸಾದ್, ಮದನ್ ಸಾಹ್ನಿ, ಸಂತೋಷ್ ಕುಮಾರ್ ಸುಮನ್, ಮತ್ತು ರಾಮ ನಿಶಾದ್, ರಾಮ್ ಕೃಪಾಲ್ ಯಾದವ್, ನಿತೀಶ್ ಮಿಶ್ರಾ, ದಾಮೋದರ್ ರಾವತ್, ಸಂಜಯ್ ಸಿಂಗ್ (ಟೈಗರ್), ಮತ್ತು ಅಶೋಕ್ ಚೌಧರಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್,ಬಿಜೆಪಿ,ಜೆಡಿಯು, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ ರಾಮ್ ವಿಲಾಸ್ ಮತ್ತು ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ಜಾತ್ಯತೀತ ಪಕ್ಷದ ಒಟ್ಟು ೩೧ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು
ಪಿಎಂ ರೋಡ್ ಶೋ:
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪಾಟ್ನಾಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯುವ ಸ್ಥಳದ ವರೆಗೆ ಬೃಹತ್ ರೋಡ್ ಶೋ ನಡೆಸಿದರು.
ಈ ವೇಳೆ ರಸ್ತೆಯ ಎರಡೂ ಕಡೆ ಬಿಜೆಪಿ-ಜೆಡಿಯು ಕಾರ್ಯಕರ್ತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ದೂರಿ ಸ್ವಾಗತ ಕೋರಿದರು.
ಇತ್ತೀಚೆಗೆ ನಡೆದ ಪಶ್ವಿಮ ಬಂಗಾಳ ಮತ್ತು ಮತ್ತು ಅಸ್ಸಾಂನಲ್ಲಿ ಬಿಜೆಪಿ ಮತ್ತು ಪುದುಚೆರಿಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಬಾರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಹಾರದ ಮುಖ್ಯಮಂತ್ರಿ ಸಮ್ರಾಟ್ ಚೌಧರಿ ಸಚಿವ ಸಂಪುಟ ವಿಸ್ತರಣಗೆ ಅನುವು ಮಾಡಿಕೊಡಲಾಗಿದೆ.
ಬಿಹಾರದಲ್ಲಿ ಕಳೆದ ೨೧ ವರ್ಷಗಳಿಂದ ಮುಖ್ಯಮಂತ್ರಿಯಾಗಿ ಅಧಿಕಾದ ನಿರ್ವಹಿಸಿದ ಜೆಡಿಯು ನಾಯಕ ನಿತೀಶ್ ಕುಮಾರ್ , ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಇರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಸಮ್ರಾಟ್ ಚೌಧರಿ ಅವರನ್ನು ಮುಖ್ಯಮಂತ್ರಿಯಾಗಿ ಕಳೆದ ತಿಂಗಳು ಪ್ರಮಾಣ ವಚನ ಸ್ವೀಕಾರ ಮಾಡಿದ್ದರು






















