Home ಸುದ್ದಿ ರಾಷ್ಟ್ರೀಯ ವಿದ್ಯಾರ್ಥಿಗಳ ಶೀಘ್ರ ಬಿಡುಗಡೆ: ಬಿಹಾರ ಸರ್ಕಾರ ನಿರ್ಧಾರ

ವಿದ್ಯಾರ್ಥಿಗಳ ಶೀಘ್ರ ಬಿಡುಗಡೆ: ಬಿಹಾರ ಸರ್ಕಾರ ನಿರ್ಧಾರ

ಪಾಟ್ನಾ,ಜು,೨೮- ರಾಜ್ಯಾದ್ಯಂತ ನೀಟ್ ಪತ್ರಿಕೆ ಸೋರಿಕೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಹಿಂಪಡೆಯಲಾಗು ವುದು ಮತ್ತು ಬಂಧಿಸಲ್ಪಟ್ಟ ಎಲ್ಲರನ್ನು ತಕ್ಷಣವೇ ಬಿಡುಗಡೆ ಮಾಡಲಾಗುವುದು ಎಂದು ಬಿಹಾರ ಸರ್ಕಾರ ಹೇಳಿದೆ.


ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಇತರ ಪತ್ರಿಕೆ ಸೋರಿಕೆ ಘಟನೆಗಳ ಕುರಿತು ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿಗಳನ್ನು ತಕ್ಷಣವೇ ಹಿಂಪಡೆಯಲಾಗುವುದು ಎಂದು ಭರವಸೆ ನೀಡಿದೆ


ಪ್ರತಿಭಟನೆಯ ಸಮಯದಲ್ಲಿ ಬಂಧಿಸಲ್ಪಟ್ಟವರನ್ನು ತಕ್ಷಣವೇ ಬಿಡುಗಡೆ ಮಾಡಲಾಗುವುದು ಮತ್ತು ಭವಿಷ್ಯದಲ್ಲಿ ಅವರ ವಿರುದ್ಧ ಯಾವುದೇ ನೇರ ಅಥವಾ ಪರೋಕ್ಷ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.


ಈ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಅಸ್ತಿತ್ವದಲ್ಲಿರುವ ಎಲ್ಲಾ ಎಫ್‌ಐಆರ್ ಗಳು, ಕ್ರಿಮಿನಲ್ ದೂರುಗಳು ಅಥವಾ ವ್ಯಕ್ತಿಗಳ ವಿರುದ್ಧದ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಲು ಕಾನೂನು ಪ್ರಕ್ರಿಯೆ ತಕ್ಷಣವೇ ಪ್ರಾರಂಭಿಸಲಾಗುವುದು” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


“ಇದಲ್ಲದೆ, ಜುಲೈ ೨೬ ರಂದು ಸಂಜೆ ೬ ಗಂಟೆಯ ಮೊದಲು ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲಾದ ಎಲ್ಲಾ ವ್ಯಕ್ತಿಗಳನ್ನು ತಕ್ಷಣವೇ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ


೭೦೦ ಜನರ ಬಂಧನ
ಬಿಹಾರ ಪೊಲೀಸರ ಪ್ರಕಾರ, ನೀಟ್ ಪತ್ರಿಕೆ ಸೋರಿಕೆಯನ್ನು ಪ್ರತಿಭಟಿಸಿ ಎಡಪಂಥೀಯ ವಿದ್ಯಾರ್ಥಿ ಸಂಘಗಳು ಕರೆ ನೀಡಿದ್ದ ರಾಜ್ಯಾದ್ಯಂತ ಬಂದ್ ಜಾರಿಗೊಳಿಸಲು ಪ್ರಯತ್ನಿಸಿದ್ದಕ್ಕಾಗಿ ಕಳೆದ ವಾರ ೬೯೪ ಜನರನ್ನು ಬಂಧಿಸಲಾಗಿದೆ. ಅವರಲ್ಲಿ ೩೩೯ ಮಂದಿ ಅಪ್ರಾಪ್ತ ವಯಸ್ಕರು ಮತ್ತು ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿಸಲಾಗಿದೆ


ವಯಸ್ಸಿನ ಪರಿಶೀಲನೆಯ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಏತನ್ಮಧ್ಯೆ, “ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಇತರ ೩೫೫ ಬಂಧಿತರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ


ಜುಲೈ ೨೫ ರ ಬಂದ್ ಘರ್ಷಣೆಯಲ್ಲಿ ೯೧ ಸಿಬ್ಬಂದಿ ಮತ್ತು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ. ಹದಿಮೂರು ನಾಗರಿಕರು ಸಹ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಹದಿಮೂರು ಸರ್ಕಾರಿ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ


ಎಕೆ -೪೭ ಬಳಕೆ: ವಿವಾದಕ್ಕೆಡೆ
ಬಿಹಾರದ ಸಿವಾನ್‌ನಲ್ಲಿ ಪೊಲೀಸ್ ಸಿಬ್ಬಂದಿ ಎಕೆ -೪೭ ರೈಫಲ್ ಬಳಸಿದ್ದಾರೆ ಎಂಬ ಆರೋಪದ ನಂತರ ಬಿಹಾರದಲ್ಲಿ ನಡೆದ ಪ್ರತಿಭಟನೆಯು ಭಾರಿ ಗದ್ದಲಕ್ಕೆ ಕಾರಣವಾಗಿದೆ. ಪ್ರತಿಭಟನೆಯ ಸಮಯದಲ್ಲಿ ಕಾನ್‌ಸ್ಟೆಬಲ್ ಒಬ್ಬರು ಅಸಾಲ್ಟ್ ರೈಫಲ್ ಬಳಸುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ


ರಾಷ್ಟ್ರೀಯ ಜನತಾ ದಳಕಾರ್ಯಾಧ್ಯಕ್ಷ ತೇಜಸ್ವಿ ಯಾದವ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.


ಈ ಘಟನೆ ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಲಾಗಿದೆ, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸದಂತೆ ಪಡೆಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.