Home ಕ್ರೈಂ ಸುದ್ದಿಗಳು ಬೈಕ್-ಕ್ಯಾಂಟರ್ ಅಪಘಾತ : ಇಬ್ಬರು ಬೈಕ್ ಸವಾರರ ಸಾವು

ಬೈಕ್-ಕ್ಯಾಂಟರ್ ಅಪಘಾತ : ಇಬ್ಬರು ಬೈಕ್ ಸವಾರರ ಸಾವು

ಕೊಲ್ಹಾರ, ಮಾ. 24: ಇಲ್ಲಿಗೆ ಸಮೀಪದ ಬಾಡಗಂಡಿ ಹತ್ತಿರ ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೀಳಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೃತರು ಕೊಲ್ಹಾರ ಪಟ್ಟಣ ಪಂಚಾಯತಿ ಅಧ್ಯಕ್ಷ ಚನಮಲ್ಲಪ್ಪ ಗಿಡ್ಡಪ್ಪಗೋಳ ಅವರ ತೃತೀಯ ಪುತ್ರ ಗುರು ಚನಮಲ್ಲಪ್ಪ ಗಿಡ್ಡಪ್ಪಗೋಳ(32) ಹಾಗೂ ಬಸವರಾಜ ಕಲ್ಲಪ್ಪ ಕಾಖಂಡಕಿ (27) ಎಂದು ಗುರುತಿಸಲಾಗಿದೆ. ವಿಜಯಪುರ ರಾಷ್ಟೀಯ ಹೆದ್ದಾರಿ 218 ಬಾಡಗಂಡಿ ಸಮೀಪದಲ್ಲಿ ಬೈಕ್ ಮತ್ತು ಸಿಹಿ ಪದಾರ್ಥಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮವಾಗಿ ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೆÇಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.