Home ಕ್ರೈಂ ಸುದ್ದಿಗಳು ಬೈಕ್-ಟ್ಯಾಂಕರ್ ಡಿಕ್ಕಿ; ಅರ್ಬನ್ ಬ್ಯಾಂಕ್ ನೌಕರ ಸಾವು- ಮತ್ತೋರ್ವನ ಸ್ಥಿತಿ ಗಂಭೀರ

ಬೈಕ್-ಟ್ಯಾಂಕರ್ ಡಿಕ್ಕಿ; ಅರ್ಬನ್ ಬ್ಯಾಂಕ್ ನೌಕರ ಸಾವು- ಮತ್ತೋರ್ವನ ಸ್ಥಿತಿ ಗಂಭೀರ

ಜಮಖಂಡಿ,ಆ.1-ಜಮಖಂಡಿ-ವಿಜಯಪುರ ರಾಜ್ಯ ಹೆದ್ದಾರಿಯ ಆಲಗೂರ ಗ್ರಾಮದ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅರ್ಬನ್ ಬ್ಯಾಂಕ್‍ನ ನೌಕರರೊಬ್ಬರು ಮೃತಪಟ್ಟಿದ್ದು, ಮತ್ತೋರ್ವ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ನಿತೀನ ಮಹಾದೇವ ಚಮಕೇರಿ (29) ಎಂದು ಗುರುತಿಸಲಾಗಿದೆ. ಅವರು ಕೆಲವು ತಿಂಗಳಿನಿಂದ ಅರ್ಬನ್ ಬ್ಯಾಂಕ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಬೈಕ್‍ನ ಹಿಂಬದಿಯಲ್ಲಿ ಕುಳಿತಿದ್ದ ಮತ್ತೋರ್ವ ನೌಕರ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರೂ ತೊದಲಬಾಗಿ ಗ್ರಾಮದ ಅರ್ಬನ್ ಬ್ಯಾಂಕ್ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕರ್ತವ್ಯ ನಿಮಿತ್ತ ತೊದಲಬಾಗಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಆಲಗೂರ ಗ್ರಾಮದ ಸಮೀಪ ಬೈಕ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಗ್ರಾಮೀಣ ಪೆÇಲೀಸ್ ಠಾಣೆಯ ಅಪರಾಧ ವಿಭಾಗದ ಪಿ.ಎಸ್.ಐ. ಎಂ.ವಾಲೇಕಾರ, ಎ.ಎಸ್.ಐ.ಗಳಾದ ಎ.ಎ. ಮಾಚಕನೂರ ಹಾಗೂ ಛವ್ವಾನ, ಗ್ರಾಮೀಣ ಠಾಣೆ ಪೆÇಲೀಸರು, ಹೆದ್ದಾರಿ ಪೆಟ್ರೋಲಿಂಗ್ ಸಿಬ್ಬಂದಿ ಮತ್ತು 112 ತುರ್ತು ಸೇವೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಕುರಿತು ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.