
ಬೀದರ, ಅ ೨೪: ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ದೃಢವಾಗಿ ಹೋರಾಡಿ, ಕಿತ್ತೂರು ಸಂಸ್ಥಾನದ ಸ್ವಾಭಿಮಾನವನ್ನು ಕಾಪಾಡಿದ ರಾಣಿ ಚೆನ್ನಮ್ಮನವರ ಶೌರ್ಯ, ಸಾಹಸ ಹಾಗೂ ತ್ಯಾಗವನ್ನು ಸ್ಮರಿಸಲಾಯಿತು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡಿಗರ ಹೆಮ್ಮೆಯ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮಾಜಿಯವರ ಜನ್ಮದಿನದ ಅಂಗವಾಗಿ ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೀದರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಬೀದರ ಸಹಾಯಕ ಆಯುಕ್ತ ಅಭಿನವ್ ಜೈನ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.





















