Home ಮುಖಪುಟ ಸುದ್ದಿ ಬಿಟಕಾಯಿನ್: ನಲಪಾಡ್‌ಗೆ ಮತ್ತೆ ಇಡಿ ಸಮನ್ಸ್

ಬಿಟಕಾಯಿನ್: ನಲಪಾಡ್‌ಗೆ ಮತ್ತೆ ಇಡಿ ಸಮನ್ಸ್

ಬೆಂಗಳೂರು,ಮೇ.೩೧-ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಅವರಿಗೆ ಮತ್ತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.


ನಲಪಾಡ್ ವಿಚಾರಣೆಗೆ ಹಾಜರಾಗುವಂತೆ ಕಳೆದ ಎರಡು ದಿನಗಳ ಹಿಂದೆಯೇ ಇಡಿ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದರು.


ಆದರೆ ಪ್ರಸ್ತುತ ರಾಜಕೀಯ ಬೆಳವಣಿಗೆಯಿಂದಾಗಿ ವಿನಾಯಿತಿ ನೀಡಲಾಗಿತ್ತು.ನಾಳೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ. ಬಿಟ್ ಕಾಯಿನ್ ಬಹುಕೋಟಿ ಹಗರಣದಲ್ಲಿ ಮೂವರನ್ನು ಬಂಧಿಸಿರುವ ಇಡಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ.


ಇತ್ತೀಚೆಗಷ್ಟೇ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಅಶೋಕನಗರದಲ್ಲಿರುವ ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಸತತ ೨೧ ಗಂಟೆಗಳ ಶೋಧ ಕಾರ್ಯ ನಡೆಸಿತ್ತು. ಈ ವೇಳೆ ಹಾರ್ಡ್‌ಡಿಸ್ಕ್, ವಿದೇಶಿ ವ್ಯವಹಾರದ ಬ್ಯಾಂಕ್ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.


ಕೆಲ ವರ್ಷಗಳ ಹಿಂದೆ ಬಿಟ್ ಕಾಯಿನ್ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು.


ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಬಿಡುಗಡೆ ಮಾಡಿದರು.