
ಸಂಜೆ ವಾಣಿ ವಾರ್ತೆ
ಜಮಖಂಡಿ: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಪ್ರಕರಣ ದಾಖಲಾಗಿದೆ ಎಂಬ ಕಾರಣಕ್ಕೆ ರಾಜೀನಾಮೆ ನೀಡಬೇಕು ಎನ್ನುವುದು ಸರಿಯಲ್ಲ. ಕೇಸ್‌ಗಳಿರುವ ಎಲ್ಲರಿಗೂ ಒಂದೇ ರೀತಿಯ ನಿಯಮ ಅನ್ವಯವಾಗಬೇಕು ಎಂದು ಹೇಳಿದರು.
“ಕೇಸ್ ಇದೆ ಎಂಬ ಕಾರಣಕ್ಕೆ ರಾಜೀನಾಮೆ ಕೊಡಬೇಕಾದರೆ, ಕೇಸ್ ಇರುವ ಎಲ್ಲರೂ ರಾಜೀನಾಮೆ ನೀಡಬೇಕಾಗುತ್ತದೆ. ಕೇಂದ್ರ ಸರ್ಕಾರದಲ್ಲೂ ಸಚಿವರು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರ ವಿರುದ್ಧ ಪ್ರಕರಣಗಳಿವೆ. ಎಲ್ಲರಿಗೂ ಒಂದೇ ನ್ಯಾಯ ಇರಬೇಕು” ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ರಾಜೀನಾಮೆ ನೀಡಬೇಕು ಎಂಬುದು ಸಂಬAಧಪಟ್ಟ ಪಕ್ಷದ ಆಂತರಿಕ ನಿರ್ಧಾರವಾಗಿದ್ದು, ಅದರ ಬಗ್ಗೆ ಆಯಾ ಪಕ್ಷವೇ ತೀರ್ಮಾನ ಕೈಗೊಳ್ಳಬೇಕು. ಈ ವಿಚಾರದಲ್ಲಿ ಸರ್ಕಾರ ಹಾಗೂ ಪಕ್ಷದ ನಿಲುವು ಸ್ಪಷ್ಟವಾಗಿದೆ ಎಂದರು.
ಇದೇ ವೇಳೆ ಲೋಕಾಯುಕ್ತ ತನಿಖೆಯ ವಿಚಾರ ಪ್ರಸ್ತಾಪಿಸಿದ ಅವರು, ಪ್ರಕರಣಕ್ಕೆ ಸಂಬAಧಿಸಿದAತೆ ಲೋಕಾಯುಕ್ತದಿಂದ ಕ್ಲೀನ್‌ಚಿಟ್ ನೀಡಲಾಗಿದೆ ಎಂಬುದು ನಮ್ಮ ಪಕ್ಷ ಹಾಗೂ ಸರ್ಕಾರದ ವಾದವಾಗಿದೆ. ಆದ್ದರಿಂದ ಕೇವಲ ಆರೋಪಗಳ ಆಧಾರದ ಮೇಲೆ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂದು ತಿಳಿಸಿದರು.
ನಗರದ ರಸ್ತೆ ಸಮಸ್ಯೆಗಳ ಕುರಿತು ಮಾತನಾಡಿದ ಸಚಿವರು, ಮಳೆಗಾಲಕ್ಕೂ ಮುನ್ನ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯ ವ್ಯಾಪ್ತಿಗೆ ಬರುವ ರಸ್ತೆಗಳ ಸಮಸ್ಯೆಗಳನ್ನು ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರೆ, ಅಗತ್ಯವಿದ್ದಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದರು.
ನಗರಸಭೆ, ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ವ್ಯಾಪ್ತಿಗೆ ಬರುವ ರಸ್ತೆಗಳ ಸಮಸ್ಯೆಗಳನ್ನು ಆಯಾ ಇಲಾಖೆಗಳು ಪರಿಹರಿಸಬೇಕು. ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಬರುವ ರಸ್ತೆಗಳಲ್ಲಿ ಸಮಸ್ಯೆ ಕಂಡುಬAದರೆ ಅಧಿಕಾರಿಗಳ ಮೂಲಕ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬಿಜೆಪಿಗರ ಪ್ರತಿಭಟನೆ ಹಾಗೂ ಸಚಿವ ನಾಗೇಂದ್ರ ಅವರ ರಾಜೀನಾಮೆ ಬೇಡಿಕೆಗೆ ಸಂಬAಧಿಸಿದAತೆ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.






























