ಸಿಂದಗಿ,ಅ.೧೬-ವಿವಿಧ ಬೇಡಿಕೆಗಳ ಇತ್ಯರ್ಥಕ್ಕೆ ಆಗ್ರಹಿಸಿ ಇಲ್ಲಿನ ಬಿಜೆಪಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಅಹೋರಾತ್ರಿ ಬೃಹತ್ ಪ್ರತಿಭಟನೆ ಆರಂಭಗೊAಡಿದೆ.
ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಆರಂಭಗೊAಡ ಸತ್ಯಾಗ್ರಹದಲ್ಲಿ ತಾಲ್ಲೂಕಿನ ವಿವಿಧ ಭಾಗಗಳ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಸತ್ಯಾಗ್ರಕ್ಕೆ ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಹೋರಾಟದ ನೇತೃತ್ವ ವಹಿಸಿರುವ ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಸಿಂದಗಿ ಮತ್ತು ಆಲ್‌ಮೇಲ್ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ಸುರಿದಿದೆ. ನದಿ ಪಾತ್ರದ ಜನತೆಯ ಜೊತೆಗೆ ಎರಡು ತಾಲ್ಲೂಕುಗಳ ಎಲ್ಲ ಹಳ್ಳಿಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಆದರೂ ಆಡಳಿತ ವ್ಯವಸ್ಥೆ ರೈತರಿಗೆ ಸ್ಪಂದಿಸುತ್ತಿಲ್ಲ. ಬೆಳೆ ಹಾನಿ ಸಮೀಕ್ಷೆ ಸರಿಯಾಗಿ ಮಾಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೂ ಕೂಡ ನಿಖರ ಮಾಹಿತಿ ಕೊಡುತ್ತಿಲ್ಲ. ತಾರತಮ್ಮ ನೀತಿ ಅನುಸರಿಸುತ್ತಿದ್ದಾರೆ. ರೈತರು ತೀವ್ರ ಸಂಕಷ್ಟದಲ್ಲಿದ್ದರೂ ಸಹ ಅವರ ನೆರವಿಗೆ ಬರುತ್ತಿಲ್ಲ. ಭಾಗಶ: ಬೆಳೆ ಹಾನಿಯಾಗಿದ್ದರೂ ಸಹ ಅಲ್ಪ ಪ್ರಮಾಣದಲ್ಲಿ ಪರಿಹಾರ ನೀಡಿ ಕೈ ತೊಳೆದುಕೊಂಡಿದೆ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಯಾವ ರೀತಿ ಪರಿಹಾರ ನೀಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಈಗಲೂ ಕೊಡಬೇಕು. ನಿಮಗೆ ಮಾಡುವುದಾಗುವುದಿಲ್ಲ. ಕನಿಷ್ಠ ಗುಂಡಿಗಳನ್ನಾದರೂ ಮುಚ್ಚಿ ಕಬ್ಬು ಸಾಗಿಸುವ ರೈತರಿಗೆ ಅನುಕೂಲ ಮಾಡಿಕೊಡಬೇಕು. ರೈತರಿಗೆ ಸಮರ್ಪಕ ಪರಿಹಾರ ಘೋಷಣೆ ಮಾಡುವವರೆಗೂ ಅಹೋರಾತ್ರಿ ಧರಣಿ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ನನ್ನ ೫೦ ವರ್ಷದ ರಾಜಕೀಯ ಜೀವನದಲ್ಲಿ ಭ್ರಷ್ಟ ಮತ್ತು ಉದಾಸೀನ ಸರಕಾರ ನೋಡಿಯೇ ಇಲ್ಲ. ರೈತರ ಬಗ್ಗೆಯಂತೂ ಕಿಂಚಿತ್ತು ಕಾಳಜಿ ಇಲ್ಲ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ, ಕರವೇ ಮುಖಂಡ ಸಂತೋಷ ಪಾಟೀಲ ಡಂಬಳ ಮಾತನಾಡಿ, ಜಾತಿ ಗಣತಿ ಅವಶ್ಯಕತೆ ಇಲ್ಲ. ಬೆಳೆ ಹಾನಿ ಸಮೀಕ್ಷೆ ಸರಿಯಾಗಿ ಮಾಡಿ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು. ಮಹಾರಾಷ್ಟç ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ ರೈತರು ಹೇಳಿದಂತೆ ಕಬ್ಬಿನ ಬೆಲೆ ನಿಗದಿ ಮಾಡಿದ್ದಾರೆ. ಆದರೆ ಸಿಂದಗಿಯಲ್ಲಿ ಮಾತ್ರ ಅದೆ ಹಳೆ ಬೆಲೆ ನೀಡಿ ರೈತರಿಗೆ ಸಂಕಷ್ಟ ತಂದೊಡ್ಡುತ್ತಿದ್ದಾರೆ. ರೈತರ ಸಂಕಷ್ಟಗಳಿಗೆ ಇಲ್ಲಿನ ಜನಪ್ರತಿನಿಧಿಗಳು ಎಳ್ಳಷ್ಟು ಸ್ಪಂದಿಸುತ್ತಿಲ್ಲ. ಕೂಡಲೇ ಸಮರ್ಪಕ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರೈತ ಮೋರ್ಚಾ ಅಧ್ಯಕ್ಷ ಪೀರು ಕೆರೂರ ಮಾತನಾಡಿ, ರೈತರಿಗೆ ಸಮರ್ಪಕ ಪರಿಹಾರ ನೀಡುವವರೆಗೂ ಹೋರಾಟ ಮುಂದುವರೆಯುತ್ತದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರೈತ ಮೋರ್ಚಾ ಪ್ರಮುಖರಾದ ಮಲ್ಲನಗೌಡ ಪಾಟೀಲ, ಬಿಜೆಪಿ ಮುಖಂಡ ಗುರು ತಳವಾರ ಮತ್ತಿರರು ಮಾತನಾಡಿದರು.
ಮಾಜಿ ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಮುಖಂಡರಾದ ಎಂ.ಎಸ್.ಮಠ, ಶ್ರೀಶೈಲ ಮಾಗಣಗೇರಿ, ಈರಣ್ಣ ರಾವೂರ, ಶಿಲ್ಪಾ ಕುದರಗೊಂಡ, ಮಡಿವಾಳಪ್ಪಗೌಡ ಪಾಟೀಲ, ಶ್ರೀಶೈಲ ಚಳ್ಳಗಿ, ಮಲ್ಲು ಸಾವಳಸಂಗ, ಪ್ರಶಾಂತ ಕದ್ದರಕಿ, ಅಶೋಕ ನಾರಾಯಣಪೂರ, ಸಿದ್ರಾಮ ಆನಗೊಂಡ, ಸಿದ್ದಲಿಂಗಯ್ಯ ಹಿರೇಮಠ, ಚಂದ್ರಶೇಖರ ಅಮಲಿಹಾಳ, ಮಾರಲಭಾವಿ, ನಾಗೂರ ಮತ್ತಿತರರು ಪಾಲ್ಗೊಂಡಿದ್ದರು. ಹೋರಾಟಕ್ಕೂ ಮೊದಲು ರಾಜು ತಾಳಿಕೋಟಿ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಸಂಜೆ ಇಡೀ ರಾತ್ರಿ ಭಜನೆ ಮಾಡಲಾಯಿತು.























