
ಬೆಂಗಳೂರು, ಏ. ೨೩- ಪ್ರಧಾನಿ ನರೇಂದ್ರ ಮೋದಿಯವರನ್ನು ಉಗ್ರವಾಗಿ ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ, ರಾಜ್ಯ ಬಿಜೆಪಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಗಾಂಧೀಜಿ ಪ್ರತಿಮೆ ಬಳಿ ಧರಣಿ ನಡೆಸಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಧರಣಿ ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಕೇಂದ್ರ ಸಚಿವ ಶೋಭಾಕರ್‍ಲಂದಾಜೆ ಸೇರಿದಂತೆ ಬಿಜೆಪಿಯ ಹಲವು ಶಾಸಕರು, ಸಂಸದರು ಭಾಗಿಯಾಗಿ ಖರ್ಗೆ ಅವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಪ್ರಧಾನಿ ಮೋದಿಯವರನ್ನು ಉಗ್ರವಾದಿ ಎಂದಿರುವ ಎಐಸಿಸಿ ಅಧ್ಯಕ್ಷರು ಕೂಡಲೇ ದೇಶದ ಜನರ ಕ್ಷಮೆ ಕೇಳಬೇಕು ಎಂದು ಪ್ರತಿಭಟನೆ ನಡೆಸಿದ ಬಿಜೆಪಿ, ಶಾಸಕರು, ಸಂಸದರು ಆಗ್ರಹಿಸಿದರು.

























