Home ಜಿಲ್ಲೆ ಕಲಬುರಗಿ ಬಿ.ನಾಗೇಂದ್ರ ಸಂಪುಟದಿಂದ ಕೈ ಬಿಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬಿ.ನಾಗೇಂದ್ರ ಸಂಪುಟದಿಂದ ಕೈ ಬಿಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕಲಬುರಗಿ,ಆ.17-ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೆ ನಡೆದ ವಾಲ್ಮೀಕಿ ಹಗರಣದಲ್ಲಿ ಶಾಮಿಲಾಗಿ ರಾಜನಾಮೆ ಕೊಟ್ಟ ಬಿ ನಾಗೇಂದ್ರ ಅವರನ್ನು ಇನ್ನು ಪ್ರಕರಣ ಬಾಕಿ ಉಳಿದಿರುವಾಗ ಮತ್ತೆ ಮಂತ್ರಿ ಮಾಡಿದ್ದನ್ನು ಖಂಡಿಸಿ ಮತ್ತು ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಟೈಯರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.
ಮಾಜಿ ಸಂಸದ ಡಾ.ಉಮೇಶ್ ಜಾಧವ್, ಮಾಜಿ ಶಾಸಕರಾದ ಸುಭಾಷ ಗುತ್ತೇದಾರ, ದತ್ತಾತ್ರೇಯ ಪಾಟೀಲ ರೇವೂರ, ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ, ಪಕ್ಷದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ, ನಗರ ಅಧ್ಯಕ್ಷ ಚಂದು ಪಾಟೀಲ, ಪಕ್ಷದ ಮಾಜಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮುಖಂಡರಾದ ಅಂಬಾರಾಯ ಅಷ್ಠಗಿ, ಮಲ್ಲಿಕಾರ್ಜುನ ಜಿನಕೇರಿ, ಶರಣಪ್ಪ ತಳವಾರ, ಜಿಲ್ಲಾ ಮಾಧ್ಯಮ ಸಂಚಾಲಕ ಆನಂದ ಪಾಟೀಲ, ಸಹ ಸಂಚಾಲಕ ಬಾಬುರಾವ ಹಾಗರಗುಂಡಗಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.