
ಬೆಂಗಳೂರು, ಅ. ೧- ಮತದಾನವು ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು. ಆದರೆ, ಬಿಜೆಪಿಯವರು ಎಸ್‌ಐಆರ್ ನೆಪದಲ್ಲಿ ಜನರಿಂದ ಈ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ.
ದೀನ ದಲಿತರು, ಬಡವರು ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಉದ್ದೇಶದಿಂದ ತಪ್ಪು ಮಾಹಿತಿಯೊಂದಿಗೆ ’ಫಾರ್ಮ್-೭’ ಸಲ್ಲಿಸುತ್ತಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೂರಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಇಂತಹ ಕೃತ್ಯವೆಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಈ ರೀತಿ ತಪ್ಪು ಮಾಹಿತಿ ನೀಡಿ ನಾಗರಿಕರನ್ನು ಮತದಾರರ ಪಟ್ಟಿಯಿಂದ ದೂರವಿಡುವವರ ಬಗ್ಗೆ ಬಿಎಲ್‌ಎಗಳು ನನಗೆ ನಿಖರ ಮಾಹಿತಿ ನೀಡಬೇಕು. ದಯವಿಟ್ಟು ಈ ಮಾಹಿತಿಯನ್ನು ಜಞshivಚಿಞumಚಿಡಿಟisಣeಟಿs@gmಚಿiಟ.ಛಿom ಗೆ ಕಳುಹಿಸಿ. ಎಂದು ತಿಳಿಸಿದ್ದಾರೆ

























