
ಬೀದರ:ಜ.೧೦:ರಾಜ್ಯ ಬಿಜೆಪಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬೀದರ್ ಜಿಲ್ಲಾ ಘಟಕದ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ವಿಶೇಷ ಸಭೆ ನಡೆಸಿದರು.
ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು, ಮುಂದಿನ ಕಾರ್ಯಯೋಜನೆಗಳು ಹಾಗೂ ಪಕ್ಷವನ್ನು ನೆಲಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಚುನಾವಣಾ ಸಿದ್ಧತೆಗಳನ್ನು ಇನ್ನಷ್ಟು ಗಟ್ಟಿಗೊಳಿಸುವುದು, ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆ ಮತ್ತು ಗ್ರಾಮ ಮಟ್ಟದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ, ಮಾಜಿ ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಶ್ರೀ ಎನ್. ರವಿ ಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸನ್ಮಾನ್ಯ ಶ್ರೀ ಪಿ. ರಾಜೀವ್, ಶ್ರೀ ಪ್ರಿತಂ ಗೌಡ
ಬೀದರ್‌ನ ಶಾಸಕರಾದ ಶ್ರೀ ಪ್ರಭು ಚವ್ಹಾಣ, ರಾಜ್ಯ ಕಾರ್ಯದರ್ಶಿಯಾಗಿರುವ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಶಾಸಕರಾದ ಶ್ರೀ ಸಿದ್ದು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್.ಜಿ. ಮೂಳೆ, ಬಿಜೆಪಿ ಬೀದರ್ ಜಿಲ್ಲಾ ಅಧ್ಯಕ್ಷರಾದ ಶ್ರೀ ಸೋಮನಾಥ್ ಪಾಟೀಲ್, ಮಾಜಿ ಕೇಂದ್ರ ಸಚಿವರಾದ ಶ್ರೀ ಭಗವಂತ ಖೂಬಾ, ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ರಘುನಾಥರಾವ ಮಲ್ಕಾಪುರ, ಮಾಜಿ ಶಾಸಕರಾದ ಶ್ರೀ ಸುಭಾಷ ಕಲ್ಲೂರ, ಶ್ರೀ ಪ್ರಕಾಶ ಖಂಡ್ರೆ, ಮಾಜಿ ಜಿಪಂ ಅಧ್ಯಕ್ಷರಾದ ಕುಶಲ ಪಾಟೀಲ ಗಾದಗಿ, ಬಾಬುರಾವ ಕಾರಬಾರಿ, ಮಾಜಿ ಜಿಪಂ ಸದಸ್ಯರಾದ ಶಕುಂತಲಾ ಬೆಲ್ದಾಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಯರನಳ್ಳಿ, ಕಿರಣ್ ಪಾಟೀಲ, ಮಾಧವ ಹಸುರೆ ಪ್ರಮುಖ ಮುಖಂಡರಾದ
ಈಶ್ವರಸಿಂಗ್ ಠಾಕುರ, ಸಂಜೇಯ ಪಠವಾರಿ, ರಾಜಶೇಖರ್ ನಾಗಮೂರ್ತಿ, ರಾಜರೆಡ್ಡಿ ಶಾಬಾದ ಸೇರಿದಂತೆ ಜಿಲ್ಲೆಯ ಎಲ್ಲಾ ಮಂಡಲ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

























