Home ಜಿಲ್ಲೆ ಕಲಬುರಗಿ ಪಂಚ ರಾಜ್ಯಗಳಲ್ಲಿ ಬಿಜೆಪಿ ಗೆಲುವು: ಮರತೂರಕರ್ ಸಂತಸ

ಪಂಚ ರಾಜ್ಯಗಳಲ್ಲಿ ಬಿಜೆಪಿ ಗೆಲುವು: ಮರತೂರಕರ್ ಸಂತಸ

ಕಲಬುರಗಿ: ಮೇ.5:ಪಂಚರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಪುದುಚೇರಿ ಹಾಗೂ ಅಸ್ಸಾರಿ ರಾಜ್ಯಗಳಲ್ಲಿ ಅಲ್ಲಿಯ ಮತದಾರರು ಎನ್ ಡಿಎ ಬೆಂಬಲಿಸುವ ಮೂಲಕ ನವ ಭಾರತಕ್ಕೆ ದಿಕ್ಕೂಚಿಯಾಗಿದ್ದಾರೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಸಂತಸ ವ್ಯಕ್ತಪಡಿದ್ದಾರೆ.

              ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಫಲಿತಾಂಶದ ಮೂಲಕ ಮತದಾರರು ಅಭಿವೃದ್ಧಿ, ಸ್ಥಿರತೆ ಮತ್ತು ಭದ್ರತೆಗೆ ಮನ್ನಣೆ ನೀಡಿದ್ದಾರೆ.ಇಂದು ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ಜನರ ವಿಶ್ವಾಸ ಮತ್ತೊಮ್ಮೆ ವ್ಯಕ್ತವಾಗಿದೆ. ಇಂದಿನ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶಾದ್ಯಂತ ಮೋದಿ ಹವಾ ಇನ್ನೂ ಮುಂದುವರಿದಿದೆ ಎಂಬುದನ್ನು ಸ್ಪಷ್ಟವಾಗಿ ಸಾಬೀತುಪಡಿಸಿವೆ. ಪಶ್ಚಿಮ ಬಂಗಾಳದ ಫಲಿತಾಂಶವು ದೇಶದ ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರ ನಂಬಿಕೆಗೆ ದೊಡ್ಡ ಜಯ ತಂದುಕೊಟ್ಟಿದೆ.
 ಇದು 'ವಿಕಸಿತ ಭಾರತ'ದ ಕನಸನ್ನು ನನಸು ಮಾಡಲು ದೇಶದ ಜನತೆ ನಮ್ಮ ಸಮರ್ಥ ನಾಯಕತ್ವದ ಮೇಲೆ ಇಟ್ಟಿರುವ ಅಚಲ ವಿಶ್ವಾಸಕ್ಕೆ ಸಂದ ಜಯವಾಗಿದೆ ಎಂದು ಅವರು ಹೇಳಿದ್ದಾರೆ.ರಾಷ್ಟ್ರದ ಐಕ್ಯತೆ, ಅಖಂಡತೆ ಮತ್ತು ರಾಷ್ಟ್ರೀಯತೆಯ ಪರವಾಗಿ ಜನಸಾಮಾನ್ಯರು ಸ್ಪಷ್ಟ ಸಂದೇಶ ನೀಡಿದ್ದಾರೆ. ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ದೂರದರ್ಶಿತ್ವ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ ಭಾರತವು ಇಂದು ಸದೃಢವಾಗಿ ಮುನ್ನಡೆಯುತ್ತಿರುವುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂದಿರುವ ಅವರು ಈ ಐತಿಹಾಸಿಕ ಗೆಲುವಿಗಾಗಿ ನಿರಂತರವಾಗಿ ಶ್ರಮಿಸಿದ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರಿಗೂ ಹೂತ್ಪೂರ್ವಕ ಅಭಿನಂದನೆಗಳನ್ನು ಸಲಿಸಿದ್ದಾರೆ.