
ಕಲಬುರಗಿ,ಏ.27: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆತಂಕವಾದಿ ಎಂದು ಅವಹೇಳನಕಾರಿ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿ ಮತ್ತು ನಾರಿಶಕ್ತಿ ವಂದನ ಬಿಲ್ ವಿರೋಧಿಸಿದ ಕಾಂಗ್ರೆಸ್ ಸರಕಾರದ ನಡೆ ವಿರೋಧಿಸಿ ಇಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯನ್ನು ಯುವ ಮೋರ್ಚಾ ಅಧ್ಯಕ್ಷ ವೀರೇಂದ್ರ ಪಾಟೀಲ್ ರಾಯಕೋಡ್ ಮತ್ತು ಬಿಜೆಪಿ ಮುಖಂಡರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.
ಪ್ರತಿಭಟನೆಯಲ್ಲಿ ಕಲ್ಬುರ್ಗಿ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್, ಬಿಜೆಪಿ ರಾಜ್ಯ ಕಾರ್ಯದರ್ಶಿ,ಶಾಸಕ ಬಸವರಾಜ್ ಮತ್ತಿಮಡು, ಮಾಜಿ ಸಚಿವ ಬಾಬುರಾವ್ ಚೌಹಾಣ್, ಅಮರನಾಥ್ ಪಾಟೀಲ್, ಶಿವರಾಜ್ ಪಾಟೀಲ್ ರದ್ದೇವಾಡಗಿ, ನಿತೀನ್ ಗುತ್ತೇದಾರ್, ಶರಣಪ್ಪ ತಳವಾರ್, ಅವ್ವಣ್ಣ ಮ್ಯಾಕೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ್ ಬಿರಾದಾರ್, ಬಸವರಾಜ್ ಬೆಣ್ಣೂರಕರ್, ಶೋಭಾ ಬಾಣಿ, ಉಮೇಶ್ ಪಾಟೀಲ್, ಮಹದೇವ್ ಬೆಳಮಗಿ, ಶಿವಯೋಗಿ ನಾಗನಹಳ್ಳಿ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಗೌರಿ ಚಿಚಕೋಟಿ, ಶೋಭಾ ಬಾಗೇವಾಡಿ, ಶಶಿಕಲಾ ತೆಂಗಳಿ, ಸುಧಾ ಹಾಲ್ಕಾಯಿ, ಮಹೇಂದ್ರ ಪೂಜಾರಿ, ಮಹೇಶ್ ಚವಾಣ್ ಅವರು ಸೇರಿದಂತೆ ಪ್ರಮುಖರು ಕಾರ್ಯಕರ್ತರು ಪಾಲ್ಗೊಂಡರು.




















