ಮಹಿಳಾ ನಿಲಯದ ನಿವಾಸಿಗಳಿಗೆ ಬ್ಲ್ಯಾಂಕೆಟ್ ವಿತರಣೆ

ಕಲಬುರಗಿ,ಡಿ.12: ನಗರದ ಆಳಂದ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದ ರಾಜ್ಯ ಮಹಿಳಾ ನಿಲಯದ ನಿವಾಸಿಗಳಿಗೆ ಮತ್ತು ಬುದ್ಧಿಮಾಂದ್ಯ ಬಾಲಕಿಯರ ಬಾಲ ವಿದ್ಯಾ ಮಂದಿರ ಮಕ್ಕಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ದಾನಿಗಳಿಂದ ಸ್ವೀಕರಿಸಿದ ಸುಮಾರು 100 ಬೆಚ್ಚನೆಯ ಉಡುಪುಗಳು (ಬ್ಲ್ಯಾಂಕೆಟ್) ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ವಿ. ಪಾಟೀಲ ಇದ್ದರು.