
ಮಾಲೂರು,ಅ.೬: ಮಾಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಂಯುಕ್ತ ಸಹಯೋಗದಲ್ಲಿ ಶಿಬರ ನಡೆಯಿತು. ಶಿಬರದಲ್ಲಿ ಎನ್.ಸಿ.ಸಿ, ಎನ್.ಎಸ್.ಎಸ್, ಭಾರತ್ ಸ್ಕೌಟ್ಸ್ & ಗೈಡ್ಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿಗಳಾಗಿದ್ದರು.
ರಕ್ತದಾನ ಶಿಬಿರಕ್ಕಾಗಿ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ, ಕೋಲಾರ ಲಯನ್ಸ್ ಕ್ಲಬ್ ಆಫ್ ಮಾಲೂರು ಟೌನ್ ಮತ್ತು ಹೆಚ್.ಡಿ.ಎಫ್.ಸಿ ಬ್ಯಾಂಕ್ ಸಹಯೋಗ ನೀಡಿದ್ದವು.






















