ಮಿಯಾಪುರ್(ತೆಲಂಗಾಣ),ಆ.೨೧:ಹೈದ್ರಾಬಾದ್‌ನ ಮಿಯಾಪುರ್‌ನಲ್ಲಿ ಕಲಬುರಗಿ ಜಿಲ್ಲೆಯ ಒಂದೇ ಕುಟುಂಬದ ಐವರ ಮೃತದೇಹ ಪತ್ತೆಯಾಗಿದೆ. ಈ ಘಟನೆ ಅನುಮಾನಕ್ಕೆ ಕಾರಣವಾದರೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮೃತರಲ್ಲಿ ೨ ವರ್ಷದ ಮಗು ಕೂಡ ಸೇರಿದೆ.
ಮೃತರನ್ನು ಕರ್ನಾಟಕದ ಕಲಬುರಗಿ ಜಿಲ್ಲೆಯ ಸೇಡಂಮಂಡಲದ ರಂಜೋಲಿಯಾ ಲಕ್ಷ್ಮಯ್ಯ (೬೦), ವೆಂಕಟಮ್ಮ (೫೫), ಅನಿಲ್ (೩೨), ಮತ್ತು ಕವಿತಾ (೨೪), ೨ ವರ್ಷದ ಮಗು ಎಂದು ಗುರುತಿಸಲಾಗಿದೆ.
ಪೊಲೀಸರೂ ಸಹ ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರೆಂದು ಸ್ಥಳೀಯರು ಹೇಳಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.
ಮೃತದೇಹಗಳನ್ನು ವಶಕ್ಕೆ ತೆಗೆದುಕೊಂಡು ತನಿಖೆ ಕೈಗೊಂಡಿದ್ದಾರೆ.

























