Home ಜಿಲ್ಲೆ ಕಲಬುರಗಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆ; ಪ್ರೇಮಿಗಳು ಶಂಕೆ

ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆ; ಪ್ರೇಮಿಗಳು ಶಂಕೆ

ಚಿತ್ತಾಪುರ: ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಸಂಕನೂರು ಗುಡ್ಡದಲ್ಲಿ ನಡೆದಿದೆ.

ಚಿತ್ತಾಪುರ ಪಟ್ಟಣದ ಬಸವ ನಗರದ ಶರಣಮ್ಮ ಭೀಮನಳ್ಳಿ (32) ಹಾಗೂ ಯಾದಗಿರಿ ಜಿಲ್ಲೆಯ ಬಾಚವಾರ ಗ್ರಾಮದ ಬಸವರಾಜ ಮಟ್ಟೇರ್ (21) ಮೃತರು ಎಂದು ತಿಳಿದುಬಂದಿದೆ.
ಇಬ್ಬರೂ ಪ್ರೇಮಿಗಳು ಎನ್ನುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಚಿತ್ತಾಪುರ ಪಿಎಸ್‍ಐ ಮಂಜುನಾಥ ರೆಡ್ಡಿ, ವಾಡಿ ಪಿಎಸ್‍ಐ ತಿರುಮಲೇಶ ಕುಂಬಾರ್ ಹಾಗೂ ಸಿಬ್ಬಂದಿ ದತ್ತು ಜಾನೆ ಸೇರಿದಂತೆ ಪೆÇಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ವಾಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ತನಿಖೆ ಮುಂದುವರಿಸಿದ್ದಾರೆ.