
ಕಲಬುರಗಿ : ಪುಸ್ತಕಗಳು ಜ್ಞಾನ, ಬುದ್ಧಿ, ಮೌಲ್ಯಗಳು, ಹೊಸ ಆಲೋಚನೆಗಳು, ಸಂಸ್ಕøತಿಗಳು, ಜನರು ಮತ್ತು ತತ್ತ್ವಚಿಂತನೆಗಳನ್ನು ಪರಿಚಯಿಸುತ್ತವೆ. ನಾಗರಿಕತೆ, ಬ್ರಹ್ಮಾಂಡ ಸೇರಿದಂತೆ ಎಲ್ಲಾ ವಿಷಯಗಳನ್ನು ತಿಳಿಸಿಕೊಡುವ ಮೂಲಕ ಜ್ಞಾನದ ಅಡಿಪಾಯವನ್ನು ನಿರ್ಮಿಸುವ ಮೂಲಕ ಸದೃಢ ಮಾನವ ಸಂಪನ್ಮೂಲ ನಿರ್ಮಾಣ ಮಾಡಿ, ಪುಸ್ತಕಗಳು ದೇಶ ಕಟ್ಟುವ ಸಾಧನಗಳಾಗಿ ಕಾರ್ಯನಿರ್ವಹಿಸುತ್ತವೆ. ವಿದ್ಯಾರ್ಥಿ ದಿಸೆಯಿಂದಲೇ ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಉಪನ್ಯಾಸಕ, ಲೇಖಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಸಂತೋಷ ಕಾಲನಿ ಕ್ರಾಸ್ ಸಮೀಪದ ‘ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ “ವಿಶ್ವ ಪುಸ್ತಕ ಪ್ರೇಮಿಗಳ ದಿನಾಚರಣೆ”ಯಲ್ಲಿ ಅವರು ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಪಠ್ಯಕ್ಕೆ ಮಾತ್ರ ಸೀಮಿವಾಗದೆ, ಶ್ರೇಷ್ಠ ಸಾಧಕರ ಜೀವನ ಚರಿತ್ರೆಯ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಇದು ನಿಮಗೆ ಸಾಧನೆಗೆ ಸ್ಪೂರ್ತಿ ನೀಡುತ್ತದೆ. ವ್ಯಕ್ತಿತ್ವ ವಿಕಸನಕ್ಕೆ ಪುಸ್ತಕಗಳು ಪೂರಕವಾಗಿವೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ದತ್ತು ಹಡಪದ, ಸಮಾಜ ಸೇವಕರಾದ ಶಿವಯೋಗೆಪ್ಪಾ ಎಸ್. ಬಿರಾದಾರ, ದಿನೇಶ್ ಮಿಶ್ರಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.




























