Home Uncategorized ತಾಯಿಯ ಎದೆಹಾಲಿನಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳ: ಡಾ. ನಾಗಲಕ್ಷ್ಮೀ ಚೌಧರಿ

ತಾಯಿಯ ಎದೆಹಾಲಿನಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳ: ಡಾ. ನಾಗಲಕ್ಷ್ಮೀ ಚೌಧರಿ

ಸಂಜೆವಾಣಿ ವಾರ್ತೆ,
ವಿಜಯಪುರ, ಆ. ೨೬: ಜನನದ ನಂತರದ ಮೊದಲ ೧೦ ದಿನಗಳಲ್ಲಿ ತಾಯಿ ನೀಡುವ ಎದೆಹಾಲು ಮಗುವಿಗೆ ಅಗತ್ಯ ಪೋಷಕಾಂಶಗಳನ್ನು ಒದಗಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆಗಾಗಿ ಆಗಮಿಸಿದ್ದ ತಾಯಂದಿರೊAದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು.
ಮಗುವಿನ ಆರೋಗ್ಯಕರ ಬೆಳವಣಿಗೆಗೆ ತಾಯಿಯ ಎದೆಹಾಲು ಅತ್ಯಂತ ಮಹತ್ವದ್ದಾಗಿದ್ದು, ತಾಯಂದಿರು ತಮ್ಮ ಮಕ್ಕಳಿಗೆ ನಿಯಮಿತವಾಗಿ ಎದೆಹಾಲು ನೀಡುವಂತೆ ಅವರು ಸಲಹೆ ನೀಡಿದರು.
ಇದೇ ವೇಳೆ ಗರ್ಭಿಣಿಯರು ಸರ್ಕಾರದ ಮಾತೃವಂದನಾ ಯೋಜನೆಗೆ ನೋಂದಾಯಿಸಿಕೊಳ್ಳುವAತೆ ತಿಳಿಸಿದ ಅವರು, ತಾಯಿ ಮತ್ತು ಮಗುವಿನ ಆರೈಕೆ ಹಾಗೂ ಗುಣಮಟ್ಟದ ಚಿಕಿತ್ಸೆಯಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.
ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಯೊAದಿಗೆ ಸಮಾಲೋಚನೆ ನಡೆಸಿದ ಅವರು, ಆಸ್ಪತ್ರೆಯ ಆವರಣವನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ರೋಗಿಗಳಿಗೆ ಆರೋಗ್ಯಕರ ವಾತಾವರಣ ಕಲ್ಪಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸಂತೋಷಕುಮಾರ ಎಚ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೀಪಾಕ್ಷಿ ಜಾನಕಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಗೀತಾ ಗುತ್ತರಗಿಮಠ, ಎಸ್.ಸಿ. ಮ್ಯಾಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.