
ಕಲಬುರಗಿ,ಮಾ.21-ಕಾರು ಡಿಕ್ಕಿ ಹೊಡೆದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಸಂಚಾರಿ ಪೊಲೀಸ್ ಠಾಣೆ-2ರ ವ್ಯಾಪ್ತಿಯಲ್ಲಿ ನಡೆದಿದೆ.
ಶಹಬಾಜ್ ಶೇಖ್ ತಂದೆ ಸಾಜೀದ್ ಶೇಖ್ರ (9) ಮೃತಪಟ್ಟ ಬಾಲಕ.
4ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಯುಗಾದಿ ಪ್ರಯುಕ್ತ ಶಾಲೆಗೆ ರಜೆ ಇದ್ದುದ್ದರಿಂದ ಅಕ್ಕಪಕ್ಕದ ಮನೆಯ ಮಕ್ಕಳೊಂದಿಗೆ ಆಟವಾಡುತ್ತ ರಸ್ತೆ ಪಕ್ಕದಲ್ಲಿ ನಿಂತಿದ್ದ. ಈ ವೇಳೆ ಆಬೀದ್ ಹುಸೇನ್ ಎಂಬುವವರು ಅವಸರದಲ್ಲಿ ಕಾರು ರಿವರ್ಸ್ ತೆಗೆದುಕೊಳ್ಳುವಾಗ ಬಾಲಕನಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಸಂಬಂ ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.



























