
ಕಲಬುರಗಿ,ಅ.31-ಬೀದಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಜಂಬಗಾ ಗ್ರಾಮದ ನಿವಾಸಿ ಶರಣಪ್ಪ ಅವರ ಪುತ್ರ ಮನೋಜ್ (4) ಮೃತ ಬಾಲಕ. ಶರಣಪ್ಪ ಅವರು ನಗರದ ರಾಯಲ್ ಪ್ಯಾಲೇಸ್ನಲ್ಲಿ ವಾಚ್ಮನ್ ಆಗಿ ಕೆಲಸ ಮಾಡುತ್ತಿದ್ದು, ಕುಟುಂಬ ಸಮೇತ ಅಲ್ಲಿಯೇ ವಾಸವಾಗಿದ್ದಾರೆ.
ಶುಕ್ರವಾರ ಸಂಜೆ ಕಾಯಕ್ ಶಾಲೆಯ ಹಿಂಭಾಗದಲ್ಲಿರುವ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಬಾಲಕ
ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ವಿರುದ್ಧ ಸ್ಟೇಷನ್ ಬಜಾರ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆ ಕುರಿತು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ನಗರದ ಬೀದಿ ನಾಯಿಗಳನ್ನು ಸ್ಥಾಳಂತರಿಸಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.























