
ಸಂಜೆವಾಣಿ ವಾರ್ತೆ,
ವಿಜಯಪುರ, ಸೆ. ೨೭: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ನಗರದ ಗಗನ ಮಹಲ್ ಗಾರ್ಡನ್ನಲ್ಲಿ ರಾಜ್ಯ, ಜಿಲ್ಲಾ, ತಾಲೂಕು, ನಗರ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಸದಸ್ಯರ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಸಂಘಟನೆಯನ್ನು ರಾಜ್ಯಮಟ್ಟದಿಂದ ಗ್ರಾಮಮಟ್ಟದವರೆಗೆ ಮತ್ತಷ್ಟು ಬಲಪಡಿಸುವುದು, ವಿವಿಧ ಘಟಕಗಳನ್ನು ಸಕ್ರಿಯಗೊಳಿಸುವುದು ಹಾಗೂ ಪದಾಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕುರಿತು ಸವಿಸ್ತಾರ ಚರ್ಚೆ ನಡೆಯಿತು.
ಸಭೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಪರಶುರಾಮ ಕಬಾಡೆ, ರಾಜ್ಯ ಉಪಾಧ್ಯಕ್ಷರಾದ ವಿಜಯಕುಮಾರ ನಿಮಾದಾರ ಹಾಗೂ ಮಲ್ಲಿಕಾರ್ಜುನ ಬೂತ್ನಾಳ, ವಿಜಯಪುರ ಜಿಲ್ಲಾ ಅಧ್ಯಕ್ಷ ನಾಗರಾಜ ಪರಶುರಾಮ ಕಬಾಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಸೆ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ತಮ್ಮ ಅಮೂಲ್ಯ ಸಲಹೆ, ಸೂಚನೆ ನೀಡಿದರು.
ರಾಜ್ಯ ಅಂಗವಿಕಲರ ಘಟಕದ ಅಧ್ಯಕ್ಷ ಅರುಣಕುಮಾರ್ ಗುಜ್ಜರ್, ರಾಜ್ಯ ಮಾಧ್ಯಮ ಘಟಕದ ಅಧ್ಯಕ್ಷ ದೌಲಪ್ಪ ಮನಗೂಳಿ, ವಿಜಯಪುರ ಜಿಲ್ಲಾ ಅಂಗವಿಕಲರ ಘಟಕದ ಅಧ್ಯಕ್ಷ ರಾಘವೇಂದ್ರ ಹೊನ್ನಕಾಂಬಳೆ, ರಾಜ್ಯ ಮಹಿಳಾ ಅಧ್ಯಕ್ಷೆ ನೀಲಾಂಬಿಕಾ ಕಟ್ಟಿಮನಿ, ವಿಜಯಪುರ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಮಹಾದೇವಿ ಕಾಳೆ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಹಕ್ ಇನಾಮದಾರ್, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹುಸೇನ್ ಹಿಪ್ಪರಗಿ ಸೇರಿದಂತೆ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು.
ಸದಸ್ಯತ್ವ ಅಭಿಯಾನಕ್ಕೆ ಆದ್ಯತೆ
ರಾಜ್ಯ, ಜಿಲ್ಲಾ, ತಾಲೂಕು, ನಗರ ಹಾಗೂ ಗ್ರಾಮ ಮಟ್ಟದಲ್ಲಿ ಸದಸ್ಯತ್ವ ಅಭಿಯಾನವನ್ನು ವ್ಯಾಪಕವಾಗಿ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಹೆಚ್ಚಿನ ಜನರನ್ನು ಸಂಘಟನೆಯೊAದಿಗೆ ಸಂಪರ್ಕಿಸುವುದು, ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವುದು ಹಾಗೂ ಸದಸ್ಯರ ವಿವರಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಕುರಿತು ಚರ್ಚಿಸಲಾಯಿತು.
ಜನಪರ ಸಮಸ್ಯೆಗಳಿಗೆ ಕಾನೂನುಬದ್ಧ ಹೋರಾಟ
ಶಿಕ್ಷಣ, ಸಾಮಾಜಿಕ ನ್ಯಾಯ ಹಾಗೂ ವಿವಿಧ ಜನಪರ ಸಮಸ್ಯೆಗಳ ಕುರಿತು ಸಂಘಟನೆ ಪರಿಣಾಮಕಾರಿಯಾಗಿ ಸ್ಪಂದಿಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಸಮಸ್ಯೆಗಳ ವಾಸ್ತವಾಂಶಗಳನ್ನು ಪರಿಶೀಲಿಸಿ, ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮನವಿ ಸಲ್ಲಿಸುವುದು ಹಾಗೂ ಸಮಸ್ಯೆ ಬಗೆಹರಿಯದ ಸಂದರ್ಭದಲ್ಲಿ ಸಂವಿಧಾನಾತ್ಮಕ, ಕಾನೂನುಬದ್ಧ ಮತ್ತು ಶಾಂತಿಯುತ ರೀತಿಯಲ್ಲಿ ಹೋರಾಟ ನಡೆಸಲು ಸಭೆ ಒಮ್ಮತ ವ್ಯಕ್ತಪಡಿಸಿತು.
ಸಂಘಟನೆಯ ಎಲ್ಲ ಚಟುವಟಿಕೆಗಳು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಮತ್ತು ಕಾನೂನಿನ ಚೌಕಟ್ಟಿನೊಳಗೆ ನಡೆಯಬೇಕು ಎಂದು ಪದಾಧಿಕಾರಿಗಳು ಒತ್ತಿ ಹೇಳಿದರು.
ವಿಜಯಪುರ ಜಿಲ್ಲಾ ಅಧ್ಯಕ್ಷ ನಾಗರಾಜ ಪರಶುರಾಮ ಕಬಾಡೆ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಚುರುಕುಗೊಳಿಸುವುದು, ತಾಲೂಕು ಮತ್ತು ನಗರ ಘಟಕಗಳನ್ನು ಬಲಪಡಿಸುವುದು, ಮಹಿಳಾ, ಅಲ್ಪಸಂಖ್ಯಾತ ಹಾಗೂ ಅಂಗವಿಕಲ ಘಟಕಗಳ ಚಟುವಟಿಕೆಗಳನ್ನು ಸಕ್ರಿಯಗೊಳಿಸುವುದು ಮತ್ತು ಸಮಾಜಮುಖಿ ಕಾರ್ಯಗಳನ್ನು ವಿಸ್ತರಿಸುವ ಕುರಿತು ಮುಂದಿನ ಕಾರ್ಯಯೋಜನೆ ರೂಪಿಸಲಾಯಿತು.
ಸಭೆಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ಸಂಘಟನೆಯ ಏಕತೆ, ಶಿಸ್ತು ಮತ್ತು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿದರು.























