Home ಜಿಲ್ಲೆ ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಬಾದಾಮಿ,ಅ೩೧ :ಶೈಕ್ಷಣಿಕ ಪಠ್ಯಕ್ರಮ ಹಾಗೂ ವಿಶ್ವವಿದ್ಯಾಲಯದ ಮಾರ್ಗದರ್ಶನದಂತೆ ನಗರದ ಕಾಳಿದಾಸ ನರ್ಸಿಂಗ್ ಮಹಾವಿದ್ಯಾಲಯದ ವತಿಯಿಂದ ಸಾರ್ವಜನಿಕರಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮವು ನಗರದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ನಡೆಸಿಕೊಟ್ಟ ಪರಿಣಾಮಕಾರಿ ಬೀದಿ ನಾಟಕದ ಮೂಲಕ ಪ್ರಾರಂಭವಾಯಿತು. ಈ ನಾಟಕದ ಮೂಲಕ ಸ್ತನ ಕ್ಯಾನ್ಸರ್‌ನ ಲಕ್ಷಣಗಳು, ಆರಂಭಿಕ ಹಂತದಲ್ಲೇ ರೋಗ ಪತ್ತೆ ಹಚ್ಚುವಿಕೆ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.


ಬಳಿಕ ಬಸ್ ನಿಲ್ದಾಣದಿಂದ ರಾಮದುರ್ಗ ವೃತ್ತದವರೆಗೆ ಬೃಹತ್ ಜಾಗೃತಿ ಜಿಲ್ಹಾ/ಜಾಥಾ (ವಾಕಥಾನ್) ನಡೆಯಿತು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜಾಗೃತಿ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಆರೋಗ್ಯದ ಕುರಿತು ಅರಿವು ಮೂಡಿಸಿದರು.


ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಸುಗುರೇಶ ಕಡಕೋಳ, ಮಾರ್ಗದರ್ಶಕ ವಿಷ್ಣು ರಾಥೋಡ್, ಕಾಲೇಜಿನ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.