
ಕಲಬುರಗಿ, ಜೂ.7: ಶನಿವಾರ ಸುರಿದ ಭಾರೀ ಮಳೆಗೆ ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಗ್ರಾಮದ ಬಳಿ ಕಿರು ಸೇತುವೆ ಕುಸಿದಿದೆ.ಚಿಮ್ಮನಚೋಡ ನರನಾಳ ಗ್ರಾಮದ ನಡುವೆ ಈ ಘಟನೆ ನಡೆದಿದ್ದು, ಸೇತುವೆ ಕುಸಿದ ಪರಿಣಾಮ ಚಿಂಚೋಳಿಯಿಂದ ಭಾಲ್ಕಿಗೆ ವಾಹನ ಸಂಚಾರ ಸ್ಥಗಿತಗೊಂಡಿದೆ.
ಸಂಪರ್ಕ ಕಡಿತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾದ್ಯತೆ ಇದೆ. ಚಿಂಚೋಳಿಯ ಬೆಡಕಪಳ್ಳಿ ಗ್ರಾಮದ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನ ಪರದಾಡುತ್ತಿದ್ದಾರೆ. ಸರ್ಕಾರ ಉಳಿದ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

























