Home ಜಿಲ್ಲೆ ಖೋ-ಖೋದಲ್ಲಿ ಬ್ರಿಲಿಯಂಟ್ ಶಾಲೆ ಪ್ರಥಮ – ಜಿಲ್ಲಾ ಮಟ್ಟಕ್ಕೆ ಆಯ್ಕೆ

ಖೋ-ಖೋದಲ್ಲಿ ಬ್ರಿಲಿಯಂಟ್ ಶಾಲೆ ಪ್ರಥಮ – ಜಿಲ್ಲಾ ಮಟ್ಟಕ್ಕೆ ಆಯ್ಕೆ

ತಾಳಿಕೋಟಿ: ಪಟ್ಟಣದ ಎಸ್.ಕೆ. ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ತಾಳಿಕೋಟಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಖೋ-ಖೋ ವಿಭಾಗದಲ್ಲಿ ಮೈಲೇಶ್ವರದ ಬ್ರಿಲಿಯಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು, ಬ್ರಿಲಿಯಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ತಂಡದ ಆಟ ಹಾಗೂ ಕ್ರೀಡಾ ಪ್ರತಿಭೆ ಪ್ರದರ್ಶಿಸುವ ಮೂಲಕ ವಿಜಯಶಾಲಿಗಳಾಗಿ ಹೊರಹೊಮ್ಮಿದರು. ಈ ಮೂಲಕ ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ದಸರಾ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸರ್ವ ಶಿಕ್ಷಕ ಬಳಗ ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ತಾಲೂಕಿನ ಕೀರ್ತಿ ಹೆಚ್ಚಿಸಲಿ ಎಂದು ಶುಭ ಹಾರೈಸಿದರು.