
ಬೀದರ್: ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಸಿಎಂ ಕಪ್-2026 ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬೀದರ್ ಜಿಲ್ಲೆಯ ಚಿದ್ರಿ ಮೂಲದ ಯುವ ಬಾಕ್ಸರ್ ಪವನ್ ಪಾಲ್ ಕಂಚಿನ ಪದಕ ಗೆದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದು ಸಾಧನೆ ಮಾಡಿದ ಪವನ್ ಪಾಲ್ ಅವರ ಪರವಾಗಿ ಅವರ ತಂದೆ ಪ್ರಮೋದ್ ಚಿದ್ರಿ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹಾಗೂ ಬೀದರ್ನಲ್ಲಿ ಮಾಜಿ ಸಚಿವ ರಹೀಂ ಖಾನ್ ಅವರು ಸನ್ಮಾನಿಸಿದ್ದರು.
ಈ ಸಂದರ್ಭದಲ್ಲಿ ಪವನ್ ಪಾಲ್ ಅವರ ಸಾಧನೆಯನ್ನು ಶ್ಲಾಘಿಸಿ, ಯುವಕರು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಕ್ರೀಡಾಪಟುಗಳಿಗೆ ಅಗತ್ಯವಿರುವ ಪೆÇ್ರೀತ್ಸಾಹ ಮತ್ತು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಪವನ್ ಪಾಲ್ ಅವರ ಸಾಧನೆ ಬೀದರ್ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದ್ದು, ಅವರ ಮುಂದಿನ ಕ್ರೀಡಾ ಬದುಕಿಗೆ ಶುಭ ಹಾರೈಸಿದರು. ಯುವ ಪ್ರತಿಭೆಗಳು ಸೂಕ್ತ ತರಬೇತಿ, ಮಾರ್ಗದರ್ಶನ ಹಾಗೂ ಸೌಲಭ್ಯಗಳನ್ನು ಪಡೆದು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು.





















