Home ಕ್ರೈಂ ಸುದ್ದಿಗಳು ಜಗದಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿಕನ ಬರ್ಬರ ಹತ್ಯೆ

ಜಗದಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿಕನ ಬರ್ಬರ ಹತ್ಯೆ

ರಬಕವಿ-ಬನಹಟ್ಟಿ | ಜು 17: ತಾಲೂಕಿನ ಜಗದಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿಕನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಪ್ರಕಾಶ್ (40) ಎಂದು ಗುರುತಿಸಲಾಗಿದ್ದು, ಅವರು ಮಹಾರಾಷ್ಟ್ರದ ಅರಗ ಗ್ರಾಮದ ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ತಿಂಗಳಿಂದ ಜಗದಾಳ ಗ್ರಾಮದ ಎಲೆ ತೋಟದಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಪ್ರಕಾಶ್ ಅವರು ಪ್ರತಿದಿನದಂತೆ ಕೆಲಸ ಮುಗಿಸಿ ಊಟ ಮಾಡಿದ ಬಳಿಕ ಗ್ರಾಮದ ಹೊರವಲಯದಲ್ಲಿರುವ ಶಾಲಾ ಆವರಣದಲ್ಲಿ ಮಲಗಿದ್ದರು ಎನ್ನಲಾಗಿದೆ.

ಈ ವೇಳೆ ಮದ್ಯದ ಅಮಲಿನಲ್ಲಿದ್ದ ಅನಾಮಧೇಯ ವ್ಯಕ್ತಿಯೊಂದಿಗೆ ಜಗಳ ನಡೆದಿದ್ದು, ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಆರೋಪಿಯು ಪರಾರಿಯಾಗಿದ್ದಾನೆ ಎಂದು ಮಾಹಿತಿ ಲಬ್ಯವಾಗಿದೆ.

ಘಟನಾ ಸ್ಥಳಕ್ಕೆ ಬನಹಟ್ಟಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.