
ತುಮಕೂರು, ಫೆ. ೨೫- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ೫೦ನೇ ವರ್ಷದ ರಾಜಕೀಯ ಜೀವನದ ಸಂಭ್ರಮ ಹಾಗೂ ಅವರ ಹುಟ್ಟು ಹಬ್ಬವನ್ನು ನಗರದ ಯಡಿಯೂರಪ್ಪ ಅಭಿಮಾನಿಗಳ ಸಂಘ ಹಾಗೂ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಮಾನಿಗಳ ಬಳಗದಿಂದ ಫೆ. ೨೭ ರಂದು ಸೇವಾ ಕಾರ್ಯಕ್ರಮಗಳ ಮೂಲಕ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಅಂದು ಬೆಳಿಗ್ಗೆ ೮.೩೦ಕ್ಕೆ ಬಿಜಿಎಸ್ ವೃತ್ತದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್ ಉದ್ಘಾಟಿಸುವರು. ಶಾಸಕ ಬಿ.ಸುರೇಶ್‌ಗೌಡ, ಮಾಜಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಶಿಕ್ಷಣ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ಎನ್.ಬಿ.ಪ್ರದೀಪ್‌ಕುಮಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಎಸ್.ಪಿ.ಚಿದಾನಂದ್, ಮುಖಂಡರಾದ ವೈ.ಹೆಚ್.ಹುಚ್ಚಯ್ಯ, ಡಾ.ಎಸ್.ಪರಮೇಶ್, ಅರಕೆರೆ ರವೀಶ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಹಿರಿಯ ಅಸಂಘಟಿತ ಕಾರ್ಮಿಕರನ್ನು ಸನ್ಮಾನಿಸಲಾಗುವುದು. ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಯಡಿಯೂರಪ್ಪ ಅಭಿಮಾನಿ, ಜಿಲ್ಲಾ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಹ ಸಂಚಾಲಕ ಆಟೋ ಯಡಿಯೂರಪ್ಪ (ಕೆ.ಎಂ.ಶಿವಕುಮಾರ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






























