Home ಜಿಲ್ಲೆ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ, ಪ್ರಶಸ್ತಿ ಪ್ರದಾನ ೩೦ಕ್ಕೆ

ಬುದ್ಧ, ಬಸವ, ಅಂಬೇಡ್ಕರ್ ಜಯಂತಿ, ಪ್ರಶಸ್ತಿ ಪ್ರದಾನ ೩೦ಕ್ಕೆ

ಬೀದರ್: ಏ.೨೮:ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಜಿಲ್ಲಾಮಟ್ಟದ ಬಸವ ಕಾಯಕ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಏ. ೩೦ ರಂದು ಸಂಜೆ ೫ಕ್ಕೆ ನಗರದ ಕೇಂದ್ರ ಬಸ್ ನಿಲ್ದಾಣ ಸಮೀಪದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜು ಮುಂಭಾಗದ ಭವಾನಿ ಮಂದಿರದ ಫಂಕ್ಷನ್ ಹಾಲ್‌ನಲ್ಲಿ ನಡೆಯಲಿದೆ.
ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಉದ್ಘಾಟಿಸುವರು. ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಪ್ರಶಸ್ತಿ ಪ್ರದಾನ ಮಾಡುವರು. ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜು ಅಧ್ಯಕ್ಷ ಡಾ. ಚಂದ್ರಕಾAತ ಪಾಟೀಲ ಅಧ್ಯಕ್ಷತೆ ವಹಿಸುವರು.
ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರAಗ ಬೆಲ್ದಾರ್ ಮುಖ್ಯ ಅತಿಥಿಯಾಗಿ, ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಾ. ವಿಜಯಕುಮಾರ ಕೆ. ಪಾಟೀಲ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ವರ ಬಿರಾದಾರ, ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ ರಾಜ್ಯ ಕಾರ್ಯದರ್ಶಿ ಸಂಜೀವಕುಮಾರ ಸ್ವಾಮಿ, ರಾಮಸ್ವಾಮಿ ಪೇರಿಯಾರ್ ಪ್ರೌಢಶಾಲೆ ಮುಖ್ಯಶಿಕ್ಷಕ ಸಿದ್ರಾಮ ನಿಜಾಂಪುರ, ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜು ಕಾರ್ಯದರ್ಶಿ ಅಭಿಷೇಕ ಪಾಟೀಲ, ನಿರ್ದೇಶಕಿ ಕಲ್ಪನಾ ಮಠಪತಿ, ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಕಲಾಲ್ ದೇವಿಪ್ರಸಾದ್ ಅತಿಥಿಗಳಾಗಿ ಪಾಲ್ಗೊಳ್ಳುವರು.
ಯರನಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶ್ಯಾಮಸುಂದರ್ ಖಾನಾಪುರ ವಿಶೇಷ ಉಪನ್ಯಾಸ ನೀಡುವರು. ಪ್ರಾಚಾರ್ಯೆ ಮಂಗಲಾ ಎನ್.ಎಂ. ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರAಗ ಬೆಲ್ದಾರ್ ತಿಳಿಸಿದ್ದಾರೆ.
ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜು, ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜು ನೌಕರರ ಸಂಘದಿAದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.