Home ಜಿಲ್ಲೆ ಅಭಿವೃದ್ಧಿ ಪಥದತ್ತ ಒಯ್ಯುವ ಬಜೆಟ್

ಅಭಿವೃದ್ಧಿ ಪಥದತ್ತ ಒಯ್ಯುವ ಬಜೆಟ್

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಒಯ್ಯುವ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹೇಳಿದ್ದಾರೆ.
ಮುಖ್ಯಮಂತ್ರಿ ಅವರು ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗೆ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಮಹಿಳೆಯರು, ಯುವಕರು, ರೈತರು ಸೇರಿದಂತೆ ಎಲ್ಲ ವರ್ಗದವರ ಹಿತ ರಕ್ಷಿಸಿದ್ದಾರೆ. ಬೀದರ್ ಜಿಲ್ಲೆಗೂ ಅನೇಕ ಕೊಡುಗೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಬಜೆಟ್ ಸರ್ವ ರೀತಿಯಿಂದಲೂ ಉತ್ತಮವಾಗಿದೆ. ಸರ್ವರ ಏಳಿಗೆಗೆ ಸಹಕರಿಸಲಿದೆ. ಅಭಿವೃದ್ಧಿಯಲ್ಲಿ ರಾಜ್ಯವನ್ನು ದೇಶದಲ್ಲೇ ಮಾದರಿ ಮಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.