
ಸಂಜೆವಾಣಿ ವಾರ್ತೆ,
ವಿಜಯಪುರ, ಫೆ. ೨: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಬಜೆಟ್ ಆಗಿದೆ ಎಂದು ನಾಗಠಾಣ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಶಿವಾನಂದ ಮಖಣಾಪೂರ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, ೨೦೪೭ರ ವಿಕಸಿತ ಭಾರತ ನಿರ್ಮಾಣಕ್ಕೆ ಬಜೆಟ್ ಪೂರಕವಾಗಿದೆ ಎಂದಿದ್ದಾರೆ.
ಬಡವರ ಪಾಲಿಗೆ ಗಗನ ಕುಸುಮವಾಗಿದ್ದ ಚಿನ್ನ, ಬೆಳ್ಳಿ ದರ ಇಳಿಕೆ, ಕ್ಯಾನ್ಸರ್ ಚಿಕಿತ್ಸೆ ಅಗ್ಗ, ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಬಂಪರ್ ಕೊಡುಗೆ, ಮೀನುಗಾರಿಕೆಗೆ ಉತ್ತೇಜನ, ಶಿಕ್ಷಣ, ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ನಿರ್ಮಲ ಸೀತಾರಾಮನ್ ಅವರು ಸರ್ವ ಜನಾಂಗಕ್ಕೆ ಒಳ್ಳೆಯ ಬಜೆಟ್ ನೀಡಿದ್ದಾರೆ ಎಂದು ಅವರು ಪ್ರಶಂಸಿಸಿದ್ದಾರೆ.























