Home ಕ್ರೈಂ ಸುದ್ದಿಗಳು ಬಸ್-ಬೈಕ್ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬಸ್-ಬೈಕ್ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಹುಮನಾಬಾದ,ಜು.12-ಕೆಎಸ್‍ಆರ್‍ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಬೀರಾಬಾದ್ ವಾಡಿ ಕ್ರಾಸ್ ಹತ್ತಿರದ ಬೀದರ್-ಕಲಬುರಗಿ ರಾಷ್ಟ್ರೀಯ ಹೆದ್ದಾರಿ 50ರ ಮೇಲೆ ಇಂದು ಬೆಳಿಗ್ಗೆ ನಡೆದಿದೆ.
ಮೃತರನ್ನು ಹುಮನಾಬಾದ ತಾಲ್ಲೂಕಿನ ದುಬಲಗುಂಡಿ ಗ್ರಾಮದ ಪವನ್ (23) ಹಾಗೂ ನರಸಮ್ಮ ಸಾಯಬಣ್ಣ (32) ಎಂದು ಗುರುತಿಸಲಾಗಿದೆ.
ಮೃತ ಪವನ್ ಅವರು ತಮ್ಮ ಚಿಕ್ಕಮ್ಮ ನರಸಮ್ಮ ಅವರನ್ನು ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೆಳ್ಳಿ ಗ್ರಾಮಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ಸ್ವಗ್ರಾಮ ದುಬಲಗುಂಡಿ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.