ಕಲಬುರಗಿ,ಆ.11: ಎನ್‍ಇಕೆಆರ್‍ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಫಜಲಪುರ ರಾಷ್ಟ್ರೀಯ ಹೆದ್ದಾರಿಯ ಗೊಬ್ಬೂರ (ಕೆ) ಗ್ರಾಮದ ಬಳಿ ರವಿವಾರ ಸಂಜೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿಯ ಸೋಮಶೇಖರ್ (55) ಪ್ರಕಾಶ್ (28) ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ಪ್ರಕಾಶ್ ಅವರ ತಾಯಿ ರೂಪಾ ( 48) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಕಲಬುರಗಿಯಿಂದ ಬೀಳಗಿ ಪಟ್ಟಣಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರಂತ ನಡೆದಿದ್ದು, ಬಸ್ ಅಪ್ಪಳಿಸಿದ ರಭಸಕ್ಕೆ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ತಂದೆ-ಮಗ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೇವಲ ಗಾಣಗಾಪುರ ಪೆÇಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
























