
ಕೋಲಾರ,ಏ.೪- ರಾಜ್ಯದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ನೇತೃತ್ವದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿದ್ದರು
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಬೇತೂರ್ ರಸ್ತೆಯ ವಾರ್ಡ್ ನಂ ೧೩ ರಲ್ಲಿ ಮನೆ ಮನೆ ಪ್ರಚಾರದಲ್ಲಿ ಭಾಗವಹಿಸಿದ್ದ ಅವರು ಕೆಲವು ಕಡೆಗಳಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ಪುಟ್ಟು ಅಂಜಿನಪ್ಪ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್, ಮಹೇಶ್ ಇದ್ದರು.


















