
ನವಲಗುಂದ,ಮೇ.೩೧: `ವಿದ್ಯಾರ್ಥಿಗಳು ಶಾಲೆಯಲ್ಲಿ ಸರ್ಕಾರದ ವತಿಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು~ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ವಿ ಡಿ ರಂಗಣ್ಣವರ ಹೇಳಿದರು.
ಅವರು ತಾಲ್ಲೂಕಿನ ಜಾವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಧ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು ಶಿಕ್ಷಣದಿಂದ ಮಾತ್ರ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು.
ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ ಹಿರೆಗಣ್ಣವರ ಮಾತನಾಡಿ ಸರ್ಕಾರದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕ, ಸಮವಸ್ತç, ಬಿಸಿಯೂಟ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ನೀಡುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಧಾಖಲು ಮಾಡಿ ಎಂದರು. ಈಶಾಲೆಯ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಮತ್ತು ಪೋಷಕರ ಸಮನ್ವಯತೆ ಕಾರಣವಾಗಿದೆ ಎಂದರು.
ಶಿಕ್ಷಕರಾದ ಎಸ್ ಎನ್ ಅಕ್ಕಿಮರಡಿ, ಎಂ ಪಿ ಶಿವಪೂಜಿಮಠ, ಸರಿತಾ ಕೊಪ್ಪದ, ಎಂ ಎಂ ನಾಯ್ಕರ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು

























