
ಗದಗ, ಅ೩೦ : ಜಿಲ್ಲೆಯಲ್ಲಿ ನವೆಂಬರ್ ೧ ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಸಂಭ್ರಮದಿAದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಸೂಚಿಸಿದರು.
ಅಂದು ಬೆಳಿಗ್ಗೆ ೭.೩೦ ಗಂಟೆಗೆ ಗದಗ ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜ ಆವರಣದಿಂದ ಕಲಾತಂಡಗಳ ಜೊತೆಗೆ ತಾಯಿ ಭುವನೇಶ್ವರಿಯ ಮೆರವಣಿಗೆಯು ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಲಿದೆ. ಬೆ.೯ ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಿರಬೇಕು ಎಂದರು.
ಪೊಲೀಸ್ ಪಡೆ, ಹೋಮಗಾರ್ಡ, ಭಾರತ ಸೇವಾ ದಳಗಳಿಂದ ಪರೇಡ್, ಪಥ ಸಂಚಲನ ಜರುಗಲಿವೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ದಚಿತ್ರಗಳ ಪ್ರದರ್ಶನ ಅಚ್ಚುಕಟ್ಟಾಗಿ ನಡೆಯುವಂತೆ ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘಸAಸ್ಥೆಯವರು ಈ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಅಂಬುಲನ್ಸ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಶಿಷ್ಟಾಚಾರದನ್ವಯ ಅತಿಥಿ ಗಣ್ಯರ ಅಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಮಾತನಾಡಿ ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಣಿತರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ,ಉಪವಿಬಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ರಾಧಾ ಮಣ್ಣೂರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎA.ತುAಬರಮಟ್ಟಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ವಿಭೂತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


















