Home ಜಿಲ್ಲೆ ಕಲಬುರಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಕರೆ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಕರೆ

ಕಲಬುರಗಿ: ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಜೇವರ್ಗಿ ಕಾಲೋನಿಯ ಭೌತಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯನ್ನು ವಿಜೃಂಭಣೆಯಿAದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (ಏSಖSಂಅ), ಪ್ರಾದೇಶಿಕ ಕೇಂದ್ರ, ಕಲಬುರಗಿಯ ವೈಜ್ಞಾನಿಕ ಅಧಿಕಾರಿ ಸಂಗನಬಸಪ್ಪ ಏವೂರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಬಾಹ್ಯಾಕಾಶ ವಿಜ್ಞಾನ ಮತ್ತು ಭಾರತದ ಬಾಹ್ಯಾಕಾಶ ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಉಪನ್ಯಾಸಕರಾದ ಡಾ. ರವಿ ಪಾಟೀಲ ಅವರು ಅತಿಥಿಗಳನ್ನು ಸ್ವಾಗತಿಸಿದರು. ಸಹ ಪ್ರಾಧ್ಯಾಪಕರಾದ ಡಾ. ಸಂಗಣ್ಣ ವಿ. ನಿಷ್ಠಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿನೋದಕುಮಾರ ರಾಠೋಡ್ ಮಾತನಾಡಿ, ಭಾರತದ ಬಾಹ್ಯಾಕಾಶ ಸಾಧನೆಗಳು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಬಾಹ್ಯಾಕಾಶ ತಂತ್ರಜ್ಞಾನವು ಕೃಷಿ, ಹವಾಮಾನ ಮುನ್ಸೂಚನೆ, ಸಂವಹನ, ನ್ಯಾವಿಗೇಶನ್, ವಿಪತ್ತು ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.
ವಿದ್ಯಾರ್ಥಿಗಳು ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಕುತೂಹಲ ಬೆಳೆಸಿಕೊಂಡು, ಪ್ರಶ್ನಿಸುವ ಮನೋಭಾವ, ವೈಜ್ಞಾನಿಕ ಚಿಂತನೆ ಹಾಗೂ ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಯುವಜನತೆಯೇ ಭಾರತದ ಬಾಹ್ಯಾಕಾಶ ಕ್ಷೇತ್ರದ ಭವಿಷ್ಯದ ಶಕ್ತಿ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗದ ಡೀನ್ ನಿಯಾಜ್ ಬೇಗಂ, ಪ್ರಾಧ್ಯಾಪಕರು ಹಾಗೂ Iಕಿಂಅ ಸಂಯೋಜಕರಾದ ಡಾ. ಶರಣಬಸಪ್ಪ ಚಿಕ್ಕಳ್ಳಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಮೋರ್ಗೆ ಪ್ರಕಾಶ್ ವಿ. ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಡಾ. ಓಂನಾಥ ಪಾಟೀಲ ಹಾಗೂ ಡಾ. ಗುರುನಾಥ ಅವರು ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಿದರು.
ಉಪನ್ಯಾಸಕಿಯರಾದ ಕುಮಾರಿ ದರ್ಶನಾ ಹಾಗೂ ಡಾ. ಅಶ್ವಿನಿ ಕಾರ್ಯಕ್ರಮ ನಿರ್ವಹಿಸಿದರು. ಶ್ರೀಮತಿ ಪೂಜಾ ಕಾಂಬಳೆ ಅವರು ಸಹಕಾರ ನೀಡಿದರು. ಕಾರ್ಯಕ್ರಮದ ಯಶಸ್ಸಿಗೆ ಭೌತಶಾಸ್ತ್ರ ವಿಭಾಗದ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.