
ಕಾಳಗಿ : ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರು ಏಕಗವಾಕ್ಷಿ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆದು ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಶಹಾಬಾದ್ ಡಿವೈಎಸ್ ಪಿ ತಿಳಿಸಿದರು.
ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬ ಆಚರಣೆ ಸಂಬಂಧ ಗುರುವಾರ ಆಯೋಜಿಸಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಂಬಂಧ ಗಣೇಶೋತ್ಸವ ಆಯೋಜಕರಿಗೆ ಅನುಮತಿ ನೀಡುವ ಸಲುವಾಗಿ ಏಕಗವಾಕ್ಷಿ ಸಮಿತಿಯನ್ನು ಜಾರಿಗೆ ತಂದಿದೆ. ಆದ್ದರಿಂದ ಸರ್ಕಾರದ ಆದೇಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹೀಗಾಗಿ ಆಯೋಜಕರು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಮೂರ್ತಿ ಪ್ರತಿಷ್ಠಾಪನೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು.
ಈ ವೇಳೆ ತಹಸೀಲ್ದಾರ್ ಪೃಥ್ವಿರಾಜ ಪಾಟೀಲ ಹಾಗೂ ಸಿಪಿಐ ಜಗದೇವಪ್ಪ ಪಾಳಾ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಗೋವಿಂದ ಅಂಗಡಿ, ರವೀಂದ್ರ, ಗಂಗಾಧರ, ಪಂಚ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ರಾಘವೇಂದ್ರ ಗುತ್ತೇದಾರ, ಪ್ರಶಾಂತ ಕದಂ, ದತ್ತು ಗುತ್ತೇದಾರ, ಜಗನ್ನಾಥ ಚಂದನಕೇರಿ, ಸುಂದರ ಸಾಗರ, ಸಂತೋಷ ನರನಾಳ, ವಿಠ್ಠಲ್ ಸೇಗಾಂವಕರ, ಜಿಯಾವುದ್ದಿನ್ ಸೌದಗರ್, ನರಸಿಂಗ ಜಾಧವ, ಮಸೂದ್ ಖಾಜಿ, ರಾಜು ಗುತ್ತೇದಾರ, ಖತಲಪ್ಪ ಅಂಕನ, ಲಕ್ಷ್ಮಿಕಾಂತ ಗುತ್ತೇದಾರ ಸೇರಿದಂತೆ ವಿವಿಧ ಗ್ರಾಮದ ಜನರು ಹಾಗೂ ಪೆÇಲೀಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


























