Home ಕ್ರೈಂ ಸುದ್ದಿಗಳು ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಜಮಖಂಡಿ:ಜೂ.6: ತಾಲೂಕಿನ ಮದರಖಂಡಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಲಭ್ಯ ಮಾಹಿತಿಯ ಪ್ರಕಾರ, ಬೈಕ್ ಸವಾರ ಬನಹಟ್ಟಿ ಕಡೆಯಿಂದ ಜಮಖಂಡಿ ಕಡೆಗೆ ಬರುತ್ತಿದ್ದ ವೇಳೆ, ಜಮಖಂಡಿಯಿಂದ ಬನಹಟ್ಟಿ ಕಡೆಗೆ ತೆರಳುತ್ತಿದ್ದ ಕಾರಿನೊಂದಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಬೈಕ್ ಸವಾರನ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರು ಯಾರು ಹಾಗೂ ಯಾವ ಊರಿನವರು ಎಂಬ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದ್ದು, ಪೆÇಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್‍ಐ ವಾಲೇಕರ ಹಾಗೂ ಪೆÇಲೀಸ್ ಸಿಬ್ಬಂದಿ ಸದಲಗಿ ಅವರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಪೆÇಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಮೃತರ ಗುರುತು ಹಾಗೂ ಅಪಘಾತದ ನಿಖರ ಕಾರಣ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.