Home ಮುಖಪುಟ ಸುದ್ದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ;ಮೂವರ ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ;ಮೂವರ ಸಾವು

ಹಾವೇರಿ,ಆ.೨೦ –ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ದಾರುಣ ಘಟನೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ.


ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ದಾರ್ಥ (೨೭), ಹಸನ್ಮುಖಿ (೨೯) ಹಾಗೂ ಯಶೋಧಾ ಬಾಯಿ (೫೧) ಮೃತಪಟ್ಟವರು.
ಅಪಘಾತದಲ್ಲಿ ಸೌಂದರ್ಯ (೨೬), ಸಿಂಧು (೨೪) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ವೇಳೆ ಚಳಗೇರಿ ಟೋಲ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ಮಾಹಿತಿ ತಿಳಿದ ತಕ್ಷಣವೇ ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.