Home ಜಿಲ್ಲೆ ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಬೇಕು:ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಬೇಕು:ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ವಿಜಯಪುರ, ಮೇ.೬: ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಗರ್ಭಿಣಿಯರ ಆರೈಕೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ೧೨ ರಿಂದ ೧೪ ಬಾರಿ ನಿಯಮಿತವಾಗಿ ಕೈಗೊಳ್ಳಬೇಕು. ಅನಿಮಿಯಾ, ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಉಚಿತ ಆರೋಗ್ಯ ಚಿಕಿತ್ಸೆಯನ್ನು ಒದಗಿಸಬೇಕು ಎಂದರು.

ಜಿಲ್ಲೆಯಲ್ಲಿ ತಾಯಿ-ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಆರ್.ಸಿ.ಹೆಚ್ ತಂತ್ರಾAಶದಲ್ಲಿ ಗರ್ಭಿಣಿಯರಿಗೆ ಕಾಲ-ಕಾಲಕ್ಕೆ ಆರೋಗ್ಯದ ಕುರಿತು ತಿಳಿವಳಿಕೆ ನೀಡುವಂತೆ ಸೂಚನೆ ನೀಡಿದರು. ಹೆರಿಗೆಯ ನಂತರ ಮಗುವಿಗೆ ಒಂದು ವರ್ಷ ತುಂಬುವವರೆಗೆ ಪಡೆದುಕೊಳ್ಳಬೇಕಾದ ಚಿಕಿತ್ಸೆ, ಔಷಧೋಪಚಾರ, ಲಸಿಕೆ ಸೌಲಭ್ಯಗಳ ಮಾಹಿತಿಯನ್ನು ಒದಗಿಸಬೇಕು. ಜೊತೆಗೆ ಆರೋಗ್ಯ ಸೇವಾ ಸೌಲಭ್ಯಗಳ ಮಾಹಿತಿ ನೀಡಬೇಕೆಂದು ಸೂಚಿಸಿದರು.
ಗರ್ಭಿಣಿಯರ ಅಗತ್ಯ ಮಾಹಿತಿಯನ್ನು ನಿಯಮಿತವಾಗಿ ನೋಂದಣಿ ಮಾಡಬೇಕು. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ಗಂಡಾAತರ ಗರ್ಭಿಣಿಯರು ಕಂಡುಬAದರೆ ಅಂತಹವರಿಗೆ ಸಕಾಲದಲ್ಲಿ ಆರೋಗ್ಯ ಸೇವೆ ನೀಡಬೇಕು. ಯಾವುದೇ ಕಾರಣಕ್ಕೆ ಗರ್ಭಿಣಿ ಹಾಗೂ ಮಕ್ಕಳನ್ನು ನಿರ್ಲಕ್ಷಿಸಬಾರದು ಎಂದರು. ಕುಟುಂಬ ಕಲ್ಯಾಣ ಯೋಜನೆಯ ಬಗ್ಗೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಹಾಗೂ ಸಮುದಾಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯವರಿಗೆ ತಾಲೂಕಾ ಮಟ್ಟದಲ್ಲಿ ತರಬೇತಿಯನ್ನು ನೀಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ಸೇರಿದಂತೆ ಎಲ್ಲ ವೈದ್ಯರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗರ್ಭಿಣಿಯರು, ಅನಾರೋಗ್ಯ ಪೀಡಿತರು ಮತ್ತು ಬಹಳ ಸಮಯದಿಂದ ಔಷಧಿ ಸೇವಿಸುತ್ತಿರುವವರು ಬಿಸಿಲಿನಲ್ಲಿ ಹೆಚ್ಚು ಪರಿಶ್ರಮ ಮಾಡುವುದನ್ನು ತಪ್ಪಿಸಬೇಕು. ಬಿಸಿಗಾಳಿಯ ಸಂದರ್ಭದಲ್ಲಿ ದೇಹದ ನೀರಿನಾಂಶ ಕಡಿಮೆಯಾದಲ್ಲಿ ಸೂರ್ಯಘಾತ ಆಗುವ ಸಾಧ್ಯತೆಯು ಅಧಿಕವಾಗಿರುತ್ತದೆ. ಆದ್ದರಿಂದ ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಕೆಲಸಗಳನ್ನು ಮಾಡಬೇಡಿ. ಹೆಚ್ಚು ನೀರನ್ನು ಕುಡಿಯಿರಿ. ಹೆಚ್ಚು ಸಕ್ಕರೆಯುಕ್ತ ಪಾನೀಯಗಳು, ಕಾಬೋಮೇಟೆಡ್ ಪಾನೀಯಗಳನ್ನು ಕುಡಿಯಬೇಡಿ. ಇದರಿಂದ ನಿರ್ಜಲೀಕರಣ ಉಂಟಾಗುತ್ತದೆ ಎಂಬುದಾಗಿ ತಿಳಿವಳಿಕೆ ನೀಡಬೇಕು. ತಿಳಿ ಬಣ್ಣದ ಬಟ್ಟೆಯನ್ನು ಧರಿಸಿರಿ, ಹೊರಾಂಗಣದಲ್ಲಿ ಕೆಲಸ ಮಾಡುವಾಗ ಆಗಾಗ್ಗೆ ವಿಶ್ರಾಂತಿ ಪಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಕಡಿಮೆ ಮಾಡುವದಕ್ಕೆ ಗುಣಾತ್ಮಾಕ ಆರೋಗ್ಯ ಸೇವೆ, ಪ್ರಸವ ಪೂರ್ವ ಆರೈಕೆ, ಗಂಡಾAತರ ಗರ್ಭಿಣಿ ಹೆರಿಗೆಗಳನ್ನು ಗುರುತಿಸಿ ಅವರಿಗೆ ಪ್ರಸೂತಿ ತಜ್ಞ ವೈದ್ಯರಿಂದ ಆರೈಕೆ ಹಾಗೂ ಆಪ್ತ ಸಮಾಲೋಚನೆ ಮೂಲಕ ಶೇ.೧೦೦ರಷ್ಟು ಹೆರಿಗೆಗಳನ್ನು ಆರೋಗ್ಯ ಸಂಸ್ಥೆಗಳಲ್ಲಿ ಮಾಡಲಾಗುತ್ತಿದೆ ಎಂದರು.
ಪ್ರತಿ ವರ್ಷ ಸಾವಿರಾರು ಜನರು ವಿಶೇಷವಾಗಿ ಮಕ್ಕಳು ನಾಯಿ ಕಡಿತಕ್ಕೆ ಒಳಗಾಗುತ್ತಾರೆ. ಸರಿಯಾದ ಅರಿವು ಮತ್ತು ಮುನ್ನಚ್ಚೆರಿಕೆಗಳೊಂದಿಗೆ ನಾಯಿ ಕಡಿತವನ್ನು ತಡೆಗಟ್ಟಬಹುದು. ಆದ್ದರಿಂದ ಎಲ್ಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ರ‍್ಯಾಬೀಸ್ ವ್ಯಾಕ್ಸಿನೇಷನ್ (ಲಸಿಕೆ) ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಮತ್ತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಸುಸಜ್ಜಿತ ಸರಕಾರಿ ಆಸ್ಪತ್ರೆಗಳು ಹಾಗೂ ಅಲ್ಲಿ ನೀಡುವ ಗುಣಮಟ್ಟದ ಆರೋಗ್ಯ ಸೇವೆಗಳು, ಪ್ರಸವಪೂರ್ವ ಮತ್ತು ಪ್ರಸವೊತ್ತರ ಆರೈಕೆ ಮೂಲಕ ನಮ್ಮ ಜಿಲ್ಲೆಯಲ್ಲಿ ಗರ್ಭಿಣಿಯರ ಆರೋಗ್ಯದ ಸೌಲಭ್ಯಗಳ ಕುರಿತು ಸಭೆಗೆ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳಿ,ಡಿಎಚ್‌ಇ, ಡಬ್ಲೂಎಚ್.ಓ ಅಧಿಕಾರಿಗಳಾದ ಡಾ. ಮುಕುಂದ ಗಲಗಲಿ, ಆರ್.ಸಿಎಚ್‌ಒ ಬಿ.ಎಲ್.ಡಿ.ಈ ಸಂಸ್ಥೆಯ ಪ್ರಸೂತಿ ತಜ್ಞರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಎಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಎಲ್ಲ ತಾಲೂಕಾ ಆರೋಗ್ಯಾಧಿಕಾರಿಗಳು, ಮುಖ್ಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.


ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ವಡ್ಡರ ಸೂಚನೆ
ವಿಜಯಪುರ,ಮೇ.೬: ಗ್ರಾಮೀಣ ಬಡಜನರಿಗೆ ಉದ್ಯೋಗ ಭದ್ರತೆ ಒದಗಿಸುವ ಮಹಾತ್ಮಾ ಗಾಂಧಿ ನರೇಗಾ ಮಹತ್ವದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ತಾಂತ್ರಿಕ ಸಂಯೋಜಕರು, ತಾಲೂಕು ಎಮ್.ಐ.ಎಸ್ ಸಂಯೋಜಕರು, ಐ.ಇ.ಸಿ ಸಂಯೋಜಕರು, ಆಡಳಿತ ಸಹಾಯಕರು ಹಾಗೂ ತಾಂತ್ರಿಕ ಸಹಾಯಕರೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಲಸದ ಬೇಡಿಕೆ ಸಲ್ಲಿಸಿದ ಪ್ರತಿಯೊಬ್ಬ ಅರ್ಹ ಕುಟುಂಬಗಳಿಗೆ ಕಾಲಮಿತಿಯೊಳಗೆ ಉದ್ಯೋಗ ಒದಗಿಸಬೇಕು ಹಾಗೂ ಕಾಮಗಾರಿಗಳನ್ನು ನಿಗದಿತ ಸಮಯದೊಳಗಾಗಿ ಪೂರ್ಣಗೊಳಿಸುವತ್ತ ವಿಶೇಷ ಗಮನ ಹರಿಸಬೇಕು ಎಂದು ಸೂಚಿಸಿದರು. ಉದ್ಯೋಗ ಮಾಡಿದ ಕೂಲಿಕಾರರ ವೇತನ ಪಾವತಿಯಲ್ಲಿ ಯಾವುದೇ ವಿಳಂಬವಾಗದAತೆ ಕ್ರಮ ಕೈಗೊಳ್ಳಬೇಕು, ಪ್ರತಿ ಹಂತದಲ್ಲೂ ಪಾರದರ್ಶಕತೆ ಕಾಪಾಡಬೇಕು. ಎಂಐಎಸ್ ನಲ್ಲಿ ಸಮಯಕ್ಕೆ ಸರಿಯಾಗಿ ಮಾಹಿತಿ ದಾಖಲಿಸಬೇಕು ಎಂದು ಸೂಚಿಸಿದರು.
ಜೊತೆಗೆ, ನೀರಿನ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ, ಹಸಿರುಪರಿಸರ ಅಭಿವೃದ್ಧಿಗೆ ಸಂಬAಧಿಸಿದ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಮನರೇಗಾ ಯೋಜನೆಯಡಿ ತಾಲೂಕುವಾರು ಗುರಿ ನಿಗದಿಪಡಿಸಲಾಗಿದೆ. ನಿಗದಿಪಡಿಸಿರುವ ಮಾನವ ದಿನಗಳ ಸೃಜನೆ ಮಾಡಿ ಗುರಿ ಸಾಧಿಸಲು ಅಧಿಕಾರಿಗಳು ಕ್ರಮ ವಹಸಿಬೇಕು ಎಂದು ಸೂಚಿಸಿದರು. ಈಗಾಗಲೇ ಅನುಮೋದನೆಗೊಂಡ ಪ್ರಗತಿ ಹಂತದ ಕೂಲಿ ಆಧಾರಿತ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಗ್ರಾ.ಪಂ.ಗಳಲ್ಲಿ ಎನ್.ಎಮ್.ಆರ್. ಜನರೇಟ್ ಮಾಡಿ ಗ್ರಾಮೀಣ ಕೂಲಿಕಾರರಿಗೆ ಉದ್ಯೋಗ ಒದಗಿಸಬೇಕು. ಎಷ್ಟೋ ಗ್ರಾಮೀಣ ಪ್ರದೇಶಗಳಲ್ಲಿ ನರೇಗಾ ಯೋಜನೆಯ ಮೇಲೆ ಅವಲಂಬಿತರಾಗಿದ್ದಾರೆ. ಅಂತಹ ಕುಟುಂಬಗಳಿಗೆ ಉದ್ಯೋಗ ಒದಗಿಸಿ ನಿಗದಿತ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಪ್ರತಿ ೨೧೧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಮುದಾಯ ಕಾಮಗಾರಿಗಳನ್ನು ಆರಂಭಿಸಿ ಕೂಲಿಕಾರರ ಫೇಸ್ ಅಥೆಂಟಿಕೇಷನ್ ಅನ್ನು ಎರಡು ದಿನಗಳಲ್ಲಿ ಕಡ್ಡಾಯವಾಗಿ ಶೇ.೧೦೦ರಷ್ಟು ಆರಂಭಿಸಬೇಕು. ಉದ್ಯೋಗ ಒದಗಿಸಿರುವ ಎಲ್ಲಾ ಕೂಲಿಕಾರರಿಗೆ ನಿಗದಿತ ಸಮಯದಲ್ಲಿ ಕೂಲಿ ಪಾವತಿಸಲು ಕ್ರಮ ಕೈಗೊಳ್ಳಬೇಕು. ಇಲ್ಲಿಯವರೆಗಿನ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಕೂಡಲೇ ಶೇ. ೧೦೦ ರಷ್ಟು ಪೂರ್ಣಗೊಳಿಸಬೇಕು ಎಂದರು.
ಕಳೆದ ೨೦೨೫-೨೬ನೇ ಸಾಲಿನಲ್ಲಿ ಎಲ್ಲ ಅನುಮೋದಿತ ಕಾಮಗಾರಿಗಳಿಗೆ ಎನ್.ಎಮ್.ಆರ್ ತೆಗೆಯಬೇಕು. ಈ ಎನ್.ಎಮ್.ಆರ್. ಗಳನ್ನು ಶೂನ್ಯ ಮಾಡದೇ ಕಡ್ಡಾಯವಾಗಿ ಎಮ್.ಐ.ಎಸ್ ಮಾಡಬೇಕು. ನರೇಗಾ ಕೂಲಿಕಾರರ ಇ-ಕೆವೈಸಿ ಮಾಡದಿದ್ದಲ್ಲಿ ಕೂಲಿಕಾರರಿಗೆ ಎನ್.ಎಮ್.ಆರ್ ಜನರೇಟ್ ಮಾಡಲು ಸಾಧ್ಯವಿಲ್ಲ. ಹಾಗಾಗಿ ಮುಂಬರುವ ಒಂದು ವಾರದಲ್ಲಿ ಕಡ್ಡಾಯವಾಗಿ ಎಲ್ಲ ನೋಂದಾಯಿತ ಕೂಲಿಕಾರರ ಇ-ಕೆವೈಸಿಯನ್ನು ಶೇ.೧೦೦ ರಷ್ಟು ಪೂರ್ಣಗೊಳಿಸಬೇಕು. ಈ ವಿಷಯದ ಕುರಿತು ಸಂಬAಧಪಟ್ಟ ಸಿಬ್ಬಂದಿಗೆ ಪ್ರಗತಿ ಸಾಧಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಸ್ತುತ ೨೦೨೬-೨೭ನೇ ಸಾಲಿನ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಈಗಾಗಲೇ ತಂತ್ರಾAಶದಲ್ಲಿ ಎಂಟ್ರಿ ಮಾಡಲಾಗಿದ್ದು, ಗ್ರಾಮ ಪಂಚಾಯಿತಿ ಲಾಗಿನ್ ನಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಎರಡು ದಿನಗಳಲ್ಲಿ ತಾಲೂಕು ಪಂಚಾಯಿತಿ ಲಾಗಿನ್ ಗೆ ಕಳುಹಿಸಬೇಕು. ಬಳಿಕ, ರಾಜ್ಯ, ಜಿಲ್ಲಾ ಗುಣ ನಿಯಂತ್ರಣ, ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಒಂಬಡ್ಸ್ ಮನ್ ವಸೂಲಾತಿ ಪ್ರಕರಣಗಳಿಗೆ ಸಂಬAಧಿಸಿದAತೆ ಸಾಬೀತಾದ ಪ್ರಕರಣಗಳ ಮೊತ್ತವನ್ನು ಕೂಡಲೇ ವಸೂಲಾತಿ ಮಾಡಿ ಬ್ಯಾಂಕ್ ಗೆ ಭರಣಾ ಮಾಡಿ. ಜಿಲ್ಲಾ ಪಂಚಾಯತಿಗೆ ವರದಿ ಸಲ್ಲಿಸಬೇಕು ಎಂದರು.
ತಾಲೂಕಾ ಹಂತದಲ್ಲಿ ಪ್ರಕರಣವಾರು ವಸೂಲಾತಿ ಪ್ರಗತಿ ಕುರಿತು ಪರಿಶೀಲಿಸಿ, ಈ ಪ್ರಕರಣಗಳನ್ನು ಸಾಬೀತುಪಡಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ವಾರ ಅಡಹಾಕ್ ಸಮಿತಿ ಸಭೆಗಳನ್ನು ಏರ್ಪಡಿಸಿ, ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು. ಏ.ಟಿ.ಆರ್ ವರದಿಯನ್ನು ತಂತ್ರಾAಶದಲ್ಲಿ ಅಪ್ಲೋಡ್ ಮಾಡುವುದು. ಈ ವಿಷಯದ ಕುರಿತು ಸಂಬAಧ ಪಟ್ಟ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರಗತಿ ಸಾಧಿಸಲು ಇದೇ ವೇಳೆ ಸೂಕ್ತ ನಿರ್ದೇಶನ ನೀಡಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಅನುಷ್ಠಾನ ಇಲಾಖೆಗಳಡಿ ಪ್ರಗತಿ ಹಂತದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಎಲ್ಲಾ ನರೇಗಾ ಸಿಬ್ಬಂದಿ ಉಪಸ್ಥಿತರಿದ್ದರು.