
ಕಲಬುರಗಿ,ನ. 19: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ರೂ.30 ಸಾವಿರ ದಂಡ ವಿಧಿಸಿದೆ.
ಪ್ರಕರಣ ನಡೆದಾಗ ಅಪರಾಧಿಯು ಅಪ್ರಾಪ್ತ ವಯಸ್ಕನಾಗಿದ್ದ. ಚಿಂಚೋಳಿ ತಾಲ್ಲೂಕಿನ ಗ್ರಾಮವೊಂದರ ಎಸ್ಎಸ್ಎಲ್ಸಿ ವಿದ್ಯಾರ್ಥಿಯಾಗಿದ್ದ ಅಪರಾಧಿಯು ಹಾಸ್ಟೆಲ್ನಲ್ಲಿದ್ದ. ಬಾಲಕಿಯು ಗ್ರಾಮದಿಂದ ಶಾಲೆಗೆ ಬರುತ್ತಿದ್ದಳು. ಸಹಪಾಠಿ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ಬಾಲಕ, ಅವಳನ್ನು ತನ್ನ ಹಾಸ್ಟೆಲ್ಗೆ ಕರೆದೊಯ್ದು 2024ರ ಫೆಬ್ರವರಿಯಲ್ಲಿ ಎರಡು ಸಲ ಲೈಂಗಿಕ ದೌರ್ಜನ್ಯ ಎಸಗಿದ್ದ.
ನಂತರದ ದಿನಗಳಲ್ಲಿ ಬಾಲಕಿಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿತ್ತು. ಬಾಲಕಿಯ ಮನೆಯವರು ಆಕೆಯನ್ನು ವೈದ್ಯರ ಬಳಿ ತೋರಿಸಿದಾಗ ಒಂದೂವರೆ ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಗಿತ್ತು.
ಬಾಲಕನ ವಿರುದ್ಧ ಚಿಂಚೋಳಿ ಪೆÇಲೀಸ್ ಠಾಣೆಯಲ್ಲಿ ಪೆÇೀಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೆÇಲೀಸ್ ಅಧಿಕಾರಿ ಎಲ್.ಎಚ್.ಗೌಂಡಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್.ಆರ್.ನರಸಿಂಹಲು ಅವರು ವಾದ ಮಂಡಿಸಿದ್ದರು.



















