
ಕಲಬುರಗಿ,ಮಾ.30-ಇದೇ ತಿಂಗಳ 14 ರಂದು ಮಂಡ್ಯ ಜಿಲ್ಲೆಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕøತ ಲೇಖಕಿ ಬಾನು ಮುಷ್ತಾಕ್ ಅವರು ಕಾಲಲ್ಲಿ ಪಾದರಕ್ಷೆ ಧರಿಸಿಯೇ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಖಂಡಸಿದಕ್ಕೆ ಭೀಮ ಆರ್ಮಿ ಯುವ ಘಟಕದ ರಾಜ್ಯಾಧ್ಯಕ್ಷ ಸಂತೋಷ ಮಾಲೆ ಅವರಿಗೆ ಕೆಲವರು ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ ಬಗ್ಗೆ ಇಲ್ಲಿನ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾನು ಮುಷ್ತಾಕ್ ಅವರ ನಡೆಯನ್ನು ಖಂಡಿಸಿದಕ್ಕೆ ಅಶ್ರಫ್ ಅಲಿ, ಬಾಬಾ ಎಂಎಸ್‍ಕೆ ಮಿಲ್ ಮತ್ತು ಸಮೀರ್ ಅವಟಿ ಎಂಬುವವರು ಅವಾಚ್ಯವಾಗಿ ಬೈಯ್ದು, ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವಿಶ್ವವಿದ್ಯಾಲಯ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.




























