
ಗುರುಮಠಕಲ್:ಫೆ.22: ತಾಲೂಕಿನ ಗುರುಮಠಕಲ್ ಪೆÇಲೀಸ್ ಠಾಣಾ ವ್ಯಾಪ್ತಿಗೆ ಬರುವ ಚಂಡರಕ್ಕಿ ಗ್ರಾಮದಲ್ಲಿ ಶನಿವಾರ ರಾತ್ರಿ ಜಾನುವಾರು ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಪೆÇಲೀಸರಿಗೆ ಒಪ್ಪಿಸಿದ ಘಟನೆ ನಡೆದಿರುವ ಮಾಹಿತಿ ಲಭ್ಯವಾಗಿದೆ.
ಗ್ರಾಮದಲ್ಲಿ ರಾತ್ರಿ ಸಮಯದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕೆಲವರು ಜಾನುವಾರು ಕಳ್ಳತನಕ್ಕೆ ಯತ್ನಿಸುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಚ್ಚರಗೊಂಡಿದ್ದಾರೆ. ಬಳಿಕ ಸ್ಥಳೀಯರು ಅವರನ್ನು ಬೆನ್ನಟ್ಟಿದ್ದು, ಕೆಲವರನ್ನು ಹಿಡಿದು ಕಂಬಕ್ಕೆ ಕಟ್ಟಿ ಹಿಡಿದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಗುರುಮಠಕಲ್ ಪೆÇಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಗ್ರಾಮದಲ್ಲಿ ಇತ್ತೀಚೆಗೆ ಜಾನುವಾರು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ರಾತ್ರಿ ಗಸ್ತು ಹೆಚ್ಚಿಸುವಂತೆ ಪೆÇಲೀಸರಿಗೆ ಮನವಿ ಮಾಡಿದ್ದಾರೆ. ಪ್ರಕರಣದ ಕುರಿತು ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.



























