
ಸೈದಾಪುರ:ಮೇ.24:ಇದೇ 28ರಂದು ನಡೆಯಲಿರುವ ಬಕ್ರೀದ್ ಹಬ್ಬವನ್ನು ಎಲ್ಲ ಸಮುದಾಯದವರು ಶಾಂತಿಯುತವಾಗಿ ಆಚರಿಸಬೇಕು. ಯಾವುದೇ ಗೊಂದಲ, ಅಶಾಂತಿಗೆ ಆಸ್ಪದ ನೀಡದೇ ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಇನ್‍ಸ್ಪೆಕ್ಟರ್ ಶಿವಾನಂದ ಮರಡಿ ಹೇಳಿದರು.
ಪಟ್ಟಣದ ಪೊಲೀಸ ಠಾಣೆಯಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು. ಪಟ್ಟಣವು ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾಗಿದ್ದು, ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಎಲ್ಲ ಹಬ್ಬಗಳನ್ನು ಸಹಭಾಗಿತ್ವ ಮತ್ತು ಪರಸ್ಪರ ಸಹಕಾರದ ಮೂಲಕ ಆಚರಿಸುವ ಪರಂಪರೆ ಮುಂದುವರಿಯಬೇಕು. ಯುವಕರಿಗೆ ಹಿರಿಯರು ಮಾರ್ಗದರ್ಶನ ನೀಡಬೇಕು. ಯಾವುದೇ ಅಹಿತಕರ ಘಟನೆಗಳು ಕಂಡುಬಂದಲ್ಲಿ ಕಾನೂನು ಕೈಗೆ ತೆಗೆದುಕೊಳ್ಳದೇ ತಕ್ಷಣವೇ ಪೆÇಲೀಸರಿಗೆ ಮಾಹಿತಿ ನೀಡಬೇಕು. ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಲು ಪೆÇಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಕೈಗೊಳ್ಳಲಿದ್ದು, ಪಟ್ಟಣದ ಪ್ರಮುಖ ವೃತ್ತಗಳು ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಪೆÇಲೀಸ್ ಕಾವಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಪೆÇಲೀಸ್ ಅಧಿಕಾರಿಗಳು ಹಾಗೂ ಪಟ್ಟಣದ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಸದಸ್ಯರು ಭಾಗವಹಿಸಿದ್ದರು.
























