
ಅಥಣಿ : ಜೂ.20:ಶಿವಯೋಗಿಗಳ ಪುಣ್ಯ ಕ್ಷೇತ್ರವಾದ ಅಥಣಿಯಲ್ಲಿ ಸರ್ವ ಧರ್ಮೀಯರೂ ಯಾವುದೇ ಭೇದ ಭಾವ ಇಲ್ಲದೇ ಒಗ್ಗಟ್ಟಿನಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿರುವುದು ಹೆಮ್ಮೆಯ ವಿಷಯ. ಅದೇ ಪರಂಪರೆಯನ್ನು ಮುಂದುವರಿಸಿಕೊಂಡು, ಈ ಬಾರಿಯ ಮೊಹರಂ ಹಬ್ಬವನ್ನು ಎಲ್ಲ ಸಮುದಾಯದವರು ಪರಸ್ಪರ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಅಥಣಿ ಪೆÇಲೀಸ್ ಉಪನಿರೀಕ್ಷಕ ಗಿರಮಲಪ್ಪ ಉಪ್ಪಾರ ಮನವಿ ಮಾಡಿದರು.
ಅವರು ಪಟ್ಟಣದ ಪೆÇೀಲೀಸ್ ಸಮುದಾಯ ಭವನದಲ್ಲಿ ಮೊಹರಂ ಹಬ್ಬದ ಪ್ರಯುಕ್ತವಾಗಿ
ಆಯೋಜಿಸಲಾಗಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಹಕರಿಸಬೇಕು. ಒಂದು ವೇಳೆ ಹಬ್ಬದ ಹೆಸರಿನಲ್ಲಿ ಶಾಂತಿ ಭಂಗ ಉಂಟುಮಾಡುವ ಅಥವಾ ಅಹಿತಕರ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದರು.
ಕಾನೂನಿಗಿಂತ ದೊಡ್ಡವರು ಯಾರು ಇಲ್ಲ ಕಾನೂನು ಎಲ್ಲರಿಗೂ ಒಂದೇ ಯಾರು ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳಬಾರದು ಏನೇ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ತಕ್ಷಣ ಪೆÇೀಲೀಸ್ ಠಾಣೆಗೆ ಸಂಪರ್ಕಿಸಿ ಮಾಹಿತಿ ನೀಡಿ ಎಂದರು.
ಈ ವೇಳೆ ಮುಸ್ಲಿಂ ಸಮಾಜದ ಮುಖಂಡ ಅಸ್ಲಮ್ ನಾಲಬಂದ ಮಾತನಾಡಿ ಅಥಣಿ ಶಾಂತಿಗೆ ಹೆಸರುವಾಸಿಯಾಗಿದೆ ಇಲ್ಲಿನ ಜನರು ಹಬ್ಬ ಹರಿದಿನಗಳಲ್ಲಿ ನಾವೆಲ್ಲರೂ ಒಂದೇ ಎನ್ನುವ ರೀತಿಯಲ್ಲಿ ಒಗ್ಗಟ್ಟಾಗಿ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುತ್ತಾ ಬಂದಿದ್ದೇವೆ. ಮುಂದೆಯೂ ಇದೇ ರೀತಿ ಎಲ್ಲ ಸಮುದಾಯದವರು ಸೇರಿ ಶಾಂತಿ ಸೌಹಾರ್ದತೆ ಮತ್ತು ಸಹೋದರತೆಯಿಂದ ಹಬ್ಬಗಳನ್ನು ಆಚರಿಸುತ್ತೇವೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಈ ವೇಳೆ ಮುಖಂಡರಾದ ಶಶಿ ಸಾಳವೆ. ಶಬ್ಬೀರ ಸಾತಬಚ್ಚೆ, ಮಂಜು ಹೋಳಿಕಟ್ಟಿ. ರಸೂಲಸಾಬ ನದಾಫ್ ಮಾತನಾಡಿ ಮೊಹರಂ ಭಾವೈಕ್ಯತೆಯ ಹಬ್ಬವಾಗಿದ್ದು. ಇಲ್ಲಿ ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯುವುದಿಲ್ಲ. ಗಂಧ ಹಾಗೂ ನೈವೇದ್ಯ ಅರ್ಪಿಸಲು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಭದ್ರತೆಗೆ ಹೆಚ್ಚಿನ ಪೆÇೀಲೀಸ್ ಸಿಬ್ಬಂದಿಗಳನ್ನು ಒದಗಿಸಬೇಕು. ಜನ ದಟ್ಟಣೆ ಆಗದಂತೆ ಬ್ಯಾರಿಕೇಡ್ ಹಾಕಬೇಕು ಎಂದು ಸಲಹೆ ನೀಡಿ ಮೊಹರಂ ಹಬ್ಬವನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಆಚರಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಭೆಯಲ್ಲಿ ಅಂಜುಮನ್ ಕಮಿಟಿ ಅಧ್ಯಕ್ಷ ಸೈಯ್ಯದಅಮೀನ ಗದ್ಯಾಳ, ಮುಖಂಡರಾದ ಶೇಖರ್ ಸೌದಾಗರ, ಅಯಾಜ ಮಾಸ್ಟರ್, ಶಿವಾನಂದ ಸೌದಾಗರ, ಇಲಿಯಾಸ್ ಹಿಪ್ಪರಗಿ, ಜುಬೇರ್ ನಾಲಬಂದ, ಮಂಜು ಹೋಳಿಕಟ್ಟಿ, ಆಸೀಫ್ ತಾಂಬೋಳಿ, ಮಹೇಂದ್ರ ರಾಜಂಗಳೆ, ಸುಭಾಸ್ ಸಾಳುಂಕೆ. ಇಮ್ರಾನ್ ದ್ರಾಕ್ಷಿ. ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಮತ್ತು ಗಣ್ಯರು ಭಾಗವಹಿಸಿದ್ದರು.


























