Home ಜಿಲ್ಲೆ ಡಿ. ದೇವರಾಜ ಅರಸು ಜನ್ಮದಿನ ಆಚರಣೆ

ಡಿ. ದೇವರಾಜ ಅರಸು ಜನ್ಮದಿನ ಆಚರಣೆ

ನವಲಗುಂದ,ಆ೨೧ : ಬಡವರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಡಿ.ದೇವರಾಜ ಅರಸು ಅವರು ರಾಜ್ಯದ ಸಾಮಾಜಿಕ ದಿಕ್ಕನ್ನೇ ಬದಲಿಸಿದ ಮಹಾನ್ ನಾಯಕರಾಗಿದ್ದರು ಎಂದು ಪುರಸಭೆ ಮುಖ್ಯಾಧಿಕಾರಿ ಎಸ್ ಪಿ ಪೂಜಾರ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮ ದಿನ ಆಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗಗಳು, ಶೋಷಿತರು ಹಾಗೂ ಬಡ ಜನರಿಗೆ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ನೀಡಲು ದೇವರಾಜ ಅರಸು ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ನವಲಗುAದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನಗೌಡ ಮಾತನಾಡಿ `ವಿದ್ಯಾರ್ಥಿಗಳು ಮತ್ತು ಯುವಜನ ಮೊಬೈಲ್ ಅತಿಯಾದ ಬಳಕೆಯಿಂದ ಹೊರಬಂದು ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ ಮಹಾನ್ ನಾಯಕರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಉಪ ತಹಶೀಲ್ದಾರ ಗಣೇಶ ಚಳ್ಳಕೆರೆ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ ಕಟ್ಟಿ, ಎಸ್ ಆರ್ ಗಣಾಚಾರಿ, ಮಂಜುನಾಥ ಬೆಣಗಿ, ಗಾಯತ್ರಿದೇವಿ ಪಾಟೀಲ, ಶಿವಯೋಗಿ ಜಂಗಣ್ಣವರ, ಜೀವನ ಪವಾರ, ಸಾಹಿರಾಬಾನು, ಸುವರ್ಣ ಬೇವಿನಗಿಡದ ರವಿರಾಜ ಕುಲಗೋಡ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.