
ಬೀದರ್: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಗೌರವ ಸಲ್ಲಿಸಿ, ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಸ್ಮರಿಸಲಾಯಿತು.
ನಾಡಿನ ಸಮಗ್ರ ಅಭಿವೃದ್ಧಿ ಹಾಗೂ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಎಲ್ಲರೂ ಕೈ ಜೋಡಿಸಬೇಕು ಎಂಬ ಸಂದೇಶವನ್ನು ಸಾರಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ್, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಮಾಜಿ ಕೇಂದ್ರ ಸಚಿವರಾದ ಭಗವಂತ ಖೂಬಾ, ವಿಧಾನ ಪರಿಷತ್ ಮಾಜಿ ಸಭಾಪತಿ ರಘುನಾಥರಾವ ಮಲ್ಕಾಪುರೆ ಮುಖಂಡರಾದ ಗುರುನಾಥ ಜ್ಯಾಂತಿಕರ್, ಬಾಬು ವಾಲಿ, ಬಾಬುರಾವ ಕಾರಬಾರಿ, ಈಶ್ವರ್ ಸಿಂಗ್ ಠಾಕೂರ್, ಶಶಿ ಹೊಸಳ್ಳಿ, ರಾಜಕುಮಾರ ಪಾಟೀಲ್, ಉಲ್ಲಾಸಿನಿ ಮುದಾಳೆ, ಸಂತೋಷ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.





















